ಕ್ರೀಡೆಯಿಂದ ಮಾನಸಿಕ, ದೈಹಿಕ ವಿಕಾಸ

ಶಾಸಕ ಜೆ.ಟಿ.ಪಾಟೀಲ ಹೇಳಿಕೆ * ತಾಲೂಕು ಮಟ್ಟದ ಕ್ರೀಡಾಕೂಟ
ಬೀಳಗಿ: ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಕ್ರೀಡಾ ಮನೋಭಾವ ಬೆಳೆಸಿಕೊಂಡರೆ ದೈಹಿಕ ಹಾಗೂ ಮಾನಸಿಕವಾಗಿ ಸದಢರಾಗಲು ಸಾಧ್ಯ ಎಂದು ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಜೆ.ಟಿ.ಪಾಟೀಲ ಹೇಳಿದರು.

 ಪಟ್ಟಣದ ವೀರ ಸಿಂಧೂರ ಲಕ್ಷ್ಮಣ ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.

 ವಿದ್ಯಾರ್ಥಿಗಳು ಉತ್ತಮ ಶಿಕ್ಷಣದ ಜತೆಗೆ ಸಂಸ್ಕಾರ ಹಾಗೂ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು. ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಹಲವು ಸೌಲಭ್ಯಗಳನ್ನು ಒದಗಿಸುತ್ತಿದ್ದು, ವಿದ್ಯಾರ್ಥಿಗಳು ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಕ್ರೀಡಾಕೂಟಗಳು ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಹೊರತರುವ ಉತ್ತಮ ವೇದಿಕೆಯಾಗಿದ್ದು, ವಿದ್ಯಾರ್ಥಿಗಳು ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

 ಶಿಕ್ಷಕರು ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣ ನೀಡುವುದರೊಂದಿಗೆ ಮಕ್ಕಳಲ್ಲಿ ಯಾವುದೇ ರೀತಿಯ ತಾರತಮ್ಯ ಮಾಡಬಾರದು ಎಂದರು.

 ಇದೇ ಸಂದರ್ಭದಲ್ಲಿ ಅಂಗವಿಕಲರ ಮಕ್ಕಳಿಗೆ ಶಾಸಕರು ತ್ರಿಚಕ್ರ ಸೈಕಲ್‌ಗಳನ್ನು ವಿತರಿಸಿದರು. ಹಟ್ಟಿ ಚಿನ್ನದ ಗಣಿ ನಿಗಮದ ವತಿಯಿಂದ ನಾಲ್ಕು ಶಾಲೆಗಳ ಅಭಿವದ್ಧಿಗೆ ತಲಾ 2 ಲಕ್ಷ ರೂ. ಅನುದಾನ ನೀಡಲಾಗಿದೆ ಎಂದು ತಿಳಿಸಿದರು.

 ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಅಣವೀರಯ್ಯ ಪ್ಯಾಟಿಮಠ, ಬಿಇಒ ಆರ್.ಎಸ್.ಆದಾಪೂರ, ಪಪಂ ಮುಖ್ಯಾಧಿಕಾರಿ ದೇವೇಂದ್ರ ಧನಪಾಲ, ಇಆರ್‌ಸಿ ಶಿವಾಜಿ ಕಾಂಬಳೆ, ನಿವತ್ತ ಶಿಕ್ಷಕ ಬಿ.ಆರ್.ಸೊನ್ನದ, ಕೆ.ಎಸ್.ಕಂಬಳಿ, ಎಸ್.ಎಸ್.ಲಮಾಣಿ, ಪರಶುರಾಮ ಮಾದರ, ಎಚ್.ಜಿ.ತಿಪ್ಪರಡ್ಡಿ, ಜಿ.ಎಲ್.ಮುಲ್ಲಾ, ರಮೇಶ ಜುಂಜೂರಿ ಸೇರಿ ಹಲವರು ಉಪಸ್ಥಿತರಿದ್ದರು.
ಬೀಳಗಿ ಪಟ್ಟಣದ ವೀರ ಸಿಂಧೂರ ಲಕ್ಷ್ಮಣ ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ತಾಲೂಕು ಮಟ್ಟಡ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಕ್ರೀಡಾಕೂಟವನ್ನು ಶಾಸಕ ಜೆ.ಟಿ.ಪಾಟೀಲ ಉದ್ಘಾಟಿಸಿದರು. ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಅಣವೀರಯ್ಯ ಪ್ಯಾಟಿಮಠ, ಬಿಇಒ ಆರ್.ಎಸ್.ಆದಾಪೂರ, ಪಪಂ ಮುಖ್ಯಾಧಿಕಾರಿ ದೇವೇಂದ್ರ ಧನಪಾಲ, ಇಆರ್‌ಸಿ ಶಿವಾಜಿ ಕಾಂಬಳೆ ಇತರರಿದ್ದರು.
Published on: 

ಬೀಳಗಿ: ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಕ್ರೀಡಾ ಮನೋಭಾವ ಬೆಳೆಸಿಕೊಂಡರೆ ದೈಹಿಕ ಹಾಗೂ ಮಾನಸಿಕವಾಗಿ ಸದಢರಾಗಲು ಸಾಧ್ಯ ಎಂದು ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಜೆ.ಟಿ.ಪಾಟೀಲ ಹೇಳಿದರು.

ಪಟ್ಟಣದ ವೀರ ಸಿಂಧೂರ ಲಕ್ಷ್ಮಣ ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಉತ್ತಮ ಶಿಕ್ಷಣದ ಜತೆಗೆ ಸಂಸ್ಕಾರ ಹಾಗೂ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು. ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಹಲವು ಸೌಲಭ್ಯಗಳನ್ನು ಒದಗಿಸುತ್ತಿದ್ದು, ವಿದ್ಯಾರ್ಥಿಗಳು ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಕ್ರೀಡಾಕೂಟಗಳು ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಹೊರತರುವ ಉತ್ತಮ ವೇದಿಕೆಯಾಗಿದ್ದು, ವಿದ್ಯಾರ್ಥಿಗಳು ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಶಿಕ್ಷಕರು ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣ ನೀಡುವುದರೊಂದಿಗೆ ಮಕ್ಕಳಲ್ಲಿ ಯಾವುದೇ ರೀತಿಯ ತಾರತಮ್ಯ ಮಾಡಬಾರದು ಎಂದರು.

ಇದೇ ಸಂದರ್ಭದಲ್ಲಿ ಅಂಗವಿಕಲರ ಮಕ್ಕಳಿಗೆ ಶಾಸಕರು ತ್ರಿಚಕ್ರ ಸೈಕಲ್‌ಗಳನ್ನು ವಿತರಿಸಿದರು. ಹಟ್ಟಿ ಚಿನ್ನದ ಗಣಿ ನಿಗಮದ ವತಿಯಿಂದ ನಾಲ್ಕು ಶಾಲೆಗಳ ಅಭಿವದ್ಧಿಗೆ ತಲಾ 2 ಲಕ್ಷ ರೂ. ಅನುದಾನ ನೀಡಲಾಗಿದೆ ಎಂದು ತಿಳಿಸಿದರು.

ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಅಣವೀರಯ್ಯ ಪ್ಯಾಟಿಮಠ, ಬಿಇಒ ಆರ್.ಎಸ್.ಆದಾಪೂರ, ಪಪಂ ಮುಖ್ಯಾಧಿಕಾರಿ ದೇವೇಂದ್ರ ಧನಪಾಲ, ಇಆರ್‌ಸಿ ಶಿವಾಜಿ ಕಾಂಬಳೆ, ನಿವತ್ತ ಶಿಕ್ಷಕ ಬಿ.ಆರ್.ಸೊನ್ನದ, ಕೆ.ಎಸ್.ಕಂಬಳಿ, ಎಸ್.ಎಸ್.ಲಮಾಣಿ, ಪರಶುರಾಮ ಮಾದರ, ಎಚ್.ಜಿ.ತಿಪ್ಪರಡ್ಡಿ, ಜಿ.ಎಲ್.ಮುಲ್ಲಾ, ರಮೇಶ ಜುಂಜೂರಿ ಸೇರಿ ಹಲವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net