ಗುರುಲಿಂಗೇಶ್ವರ ಮಠದ ಮುಂದೆ ಭಕ್ತರ ದಿಢೀರ್ ಪ್ರತಿಭಟನೆ

ಪೊಲೀಸರೊಂದಿಗೆ ಪ್ರತಿಭಟನಾಕಾರರ ತೀವ್ರ ವಾಗ್ವಾದ * ಪ್ರತಿಭಟನೆ ಮೊಟಕು
ಕಲಾದಗಿ : ಸ್ಥಳೀಯ ಶ್ರೀ ಗುರುಲಿಂಗೇಶ್ವರ ಮಠದ ಪೀಠಾಧಿಪತಿ ಹಾಗೂ ಮಠದ ಶಾಖೆಗೆ ಸಂಬಂಧಿಸಿದ ವಿವಾದ ನ್ಯಾಯಾಲಯದಲ್ಲಿರುವ ನಡುವೆಯೇ, ಗಂಗಾಧರ ಸ್ವಾಮಿಗಳ ನಡೆಗೆ ಆಕ್ಷೇಪ ವ್ಯಕ್ತಪಡಿಸಿ ಭಕ್ತರ ಗುಂಪೊಂದು ಸೋಮವಾರ ಮಠದ ಆವರಣದಲ್ಲಿ ದಿಢೀರ್ ಪ್ರತಿಭಟನೆ ನಡೆಸಿತು.

 ಇತ್ತೀಚೆಗೆ ನಡೆದ ಪುಣ್ಯಾರಾಧನೆ ಕಾರ್ಯಕ್ರಮದ ಬ್ಯಾನರ್‌ನಲ್ಲಿ ಗಂಗಾಧರ ಸ್ವಾಮಿಗಳನ್ನು ಪೀಠಾಧ್ಯಕ್ಷರೆಂದು ಹಾಗೂ ಮಠವನ್ನು ರಂಭಾಪುರಿ ಶಾಖೆಯ ಮಠವೆಂದು ನಮೂದಿಸಿರುವುದು ನ್ಯಾಯಾಲಯದ ವಿಚಾರಣೆಯ ಹಿನ್ನೆಲೆಯಲ್ಲಿ ಆಕ್ಷೇಪಾರ್ಹವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಈ ಕುರಿತು ಸಮಂಜಸ ಉತ್ತರ ನೀಡಬೇಕು ಎಂದು ಆಗ್ರಹಿಸಿದರು.

 ಗಂಗಾಧರ ಸ್ವಾಮಿಗಳು ಕಾರ್ಯ ನಿಮಿತ್ತ ಹೊರಗಿದ್ದ ಹಿನ್ನೆಲೆಯಲ್ಲಿ, ಅವರು ಬರುವವರೆಗೆ ಮಠದಲ್ಲೇ ಪ್ರತಿಭಟನೆ ಮುಂದುವರಿಸುವುದಾಗಿ ಪ್ರತಿಭಟನಾಕಾರರು ಪಟ್ಟು ಹಿಡಿದರು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಕಲಾದಗಿ ಠಾಣಾಧಿಕಾರಿ ಪ್ರವೀಣ ಬೀಳಗಿ ಹಾಗೂ ಬಳಿಕ ಸಿಪಿಐ ರಾಮಣ್ಣ ಬಿರಾದಾರ ಅವರು ಪ್ರತಿಭಟನೆ ಹಿಂಪಡೆಯುವಂತೆ ಮನವೊಲಿಸಲು ಯತ್ನಿಸಿದರು. ಆದರೆ ಪ್ರತಿಭಟನಾಕಾರರು ತಮ್ಮ ನಿಲುವಿನಿಂದ ಹಿಂದೆ ಸರಿಯಲಿಲ್ಲ.

 ಬಳಿಕ ಸ್ಥಳಕ್ಕೆ ಆಗಮಿಸಿದ ಡಿವೈಎಸ್‌ಪಿ ಗಜಾನನ ಸುತಾರ ಮತ್ತು ಪ್ರತಿಭಟನಾಕಾರರ ನಡುವೆ ಪ್ರಕರಣದ ವಿಚಾರವಾಗಿ ತೀವ್ರ ವಾಗ್ವಾದ ನಡೆಯಿತು.

 ವಿವಾದ ನ್ಯಾಯಾಲಯದಲ್ಲಿರುವುದರಿಂದ ಕಾನೂನು ಪ್ರಕ್ರಿಯೆ ಮೂಲಕವೇ ಪರಿಹಾರ ಕಂಡುಕೊಳ್ಳಬೇಕು ಎಂದು ಪೊಲೀಸರು ಸೂಚಿಸಿದರು. ಪ್ರತಿಭಟನೆ ಮುಂದುವರಿಸಿದರೆ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಿದರು.ನಂತರ ಡಿವೈಎಸ್‌ಪಿ ನೇತತ್ವದ ಪೊಲೀಸರು ಪ್ರತಿಭಟನಾಕಾರರನ್ನು ಮಠದ ಆವರಣದಿಂದ ಚದುರಿಸಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಮೊಟಕುಗೊಂಡಿತು. ಘಟನೆ ಹಿನ್ನೆಲೆಯಲ್ಲಿ ಮಠದ ಸುತ್ತಮುತ್ತ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
ಕಲಾದಗಿ ಸ್ಥಳೀಯ ಶ್ರೀ ಗುರುಲಿಂಗೇಶ್ವರ ಮಠದ ಮುಂದೆ ಪ್ರತಿಭಟನಾಕಾರರು ಹಾಗೂ ಡಿವೈಎಸ್‌ಪಿ ಗಜಾನನ ಸುತಾರ ನಡುವೆ ವಾಗ್ವಾದ ನಡೆಯುತ್ತಿರುವುದು.
Published on: 

ಕಲಾದಗಿ : ಸ್ಥಳೀಯ ಶ್ರೀ ಗುರುಲಿಂಗೇಶ್ವರ ಮಠದ ಪೀಠಾಧಿಪತಿ ಹಾಗೂ ಮಠದ ಶಾಖೆಗೆ ಸಂಬಂಧಿಸಿದ ವಿವಾದ ನ್ಯಾಯಾಲಯದಲ್ಲಿರುವ ನಡುವೆಯೇ, ಗಂಗಾಧರ ಸ್ವಾಮಿಗಳ ನಡೆಗೆ ಆಕ್ಷೇಪ ವ್ಯಕ್ತಪಡಿಸಿ ಭಕ್ತರ ಗುಂಪೊಂದು ಸೋಮವಾರ ಮಠದ ಆವರಣದಲ್ಲಿ ದಿಢೀರ್ ಪ್ರತಿಭಟನೆ ನಡೆಸಿತು.

ಇತ್ತೀಚೆಗೆ ನಡೆದ ಪುಣ್ಯಾರಾಧನೆ ಕಾರ್ಯಕ್ರಮದ ಬ್ಯಾನರ್‌ನಲ್ಲಿ ಗಂಗಾಧರ ಸ್ವಾಮಿಗಳನ್ನು ಪೀಠಾಧ್ಯಕ್ಷರೆಂದು ಹಾಗೂ ಮಠವನ್ನು ರಂಭಾಪುರಿ ಶಾಖೆಯ ಮಠವೆಂದು ನಮೂದಿಸಿರುವುದು ನ್ಯಾಯಾಲಯದ ವಿಚಾರಣೆಯ ಹಿನ್ನೆಲೆಯಲ್ಲಿ ಆಕ್ಷೇಪಾರ್ಹವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಈ ಕುರಿತು ಸಮಂಜಸ ಉತ್ತರ ನೀಡಬೇಕು ಎಂದು ಆಗ್ರಹಿಸಿದರು.

ಗಂಗಾಧರ ಸ್ವಾಮಿಗಳು ಕಾರ್ಯ ನಿಮಿತ್ತ ಹೊರಗಿದ್ದ ಹಿನ್ನೆಲೆಯಲ್ಲಿ, ಅವರು ಬರುವವರೆಗೆ ಮಠದಲ್ಲೇ ಪ್ರತಿಭಟನೆ ಮುಂದುವರಿಸುವುದಾಗಿ ಪ್ರತಿಭಟನಾಕಾರರು ಪಟ್ಟು ಹಿಡಿದರು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಕಲಾದಗಿ ಠಾಣಾಧಿಕಾರಿ ಪ್ರವೀಣ ಬೀಳಗಿ ಹಾಗೂ ಬಳಿಕ ಸಿಪಿಐ ರಾಮಣ್ಣ ಬಿರಾದಾರ ಅವರು ಪ್ರತಿಭಟನೆ ಹಿಂಪಡೆಯುವಂತೆ ಮನವೊಲಿಸಲು ಯತ್ನಿಸಿದರು. ಆದರೆ ಪ್ರತಿಭಟನಾಕಾರರು ತಮ್ಮ ನಿಲುವಿನಿಂದ ಹಿಂದೆ ಸರಿಯಲಿಲ್ಲ.

ಬಳಿಕ ಸ್ಥಳಕ್ಕೆ ಆಗಮಿಸಿದ ಡಿವೈಎಸ್‌ಪಿ ಗಜಾನನ ಸುತಾರ ಮತ್ತು ಪ್ರತಿಭಟನಾಕಾರರ ನಡುವೆ ಪ್ರಕರಣದ ವಿಚಾರವಾಗಿ ತೀವ್ರ ವಾಗ್ವಾದ ನಡೆಯಿತು.

ವಿವಾದ ನ್ಯಾಯಾಲಯದಲ್ಲಿರುವುದರಿಂದ ಕಾನೂನು ಪ್ರಕ್ರಿಯೆ ಮೂಲಕವೇ ಪರಿಹಾರ ಕಂಡುಕೊಳ್ಳಬೇಕು ಎಂದು ಪೊಲೀಸರು ಸೂಚಿಸಿದರು. ಪ್ರತಿಭಟನೆ ಮುಂದುವರಿಸಿದರೆ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಿದರು.ನಂತರ ಡಿವೈಎಸ್‌ಪಿ ನೇತತ್ವದ ಪೊಲೀಸರು ಪ್ರತಿಭಟನಾಕಾರರನ್ನು ಮಠದ ಆವರಣದಿಂದ ಚದುರಿಸಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಮೊಟಕುಗೊಂಡಿತು. ಘಟನೆ ಹಿನ್ನೆಲೆಯಲ್ಲಿ ಮಠದ ಸುತ್ತಮುತ್ತ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net