ಜಾನಪದ ಕಲೆ ಬೆಳೆಸಲು ಎಲ್ಲರೂ ಕೈಜೋಡಿಸಿ

ಕನ್ನಡ ಜಾನಪದ ಪರಿಷತ್ ಅಧ್ಯಕ್ಷ ಡಾ. ಎಸ್. ಬಾಲಾಜಿ ಹೇಳಿಕೆ
ಬಾದಾಮಿ: ಜಾನಪದ ಕಲೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸಿ ಉಳಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಈ ನಿಟ್ಟಿನಲ್ಲಿ ಜಾನಪದ ಕಲಾವಿದರು, ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರು ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಕನ್ನಡ ಜಾನಪದ ಪರಿಷತ್ ಅಧ್ಯಕ್ಷ ಡಾ. ಎಸ್. ಬಾಲಾಜಿ ಹೇಳಿದರು.

 ತಾಲೂಕಿನ ಢಾಣಕಶಿರೂರ ಗ್ರಾಮದಲ್ಲಿ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಕನ್ನಡ ಜಾನಪದ ಪರಿಷತ್ ಮತ್ತು ಕಲ್ಮೇಶ್ವರ ಭಜನಾ ಸಂಘದ ಸಂಯುಕ್ತ ಆಶ್ರಯದಲ್ಲಿ ಗುರುವಾರ ಆಯೋಜಿಸಿದ್ದ ಪರಿಷತ್ ಪದಾಧಿಕಾರಿಗಳ ಪದಗ್ರಹಣ ಹಾಗೂ ’ಜನಪದ ಸಂಭ್ರಮ-2026’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

 ಹೊಸಪೇಟೆ ಹಾಳಕೇರಿ ಮಠದ ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಿದ್ದರು. ಜ್ಯೋತಿ ಪತ್ತಿನ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಶಿವಪ್ಪ ಬಸಪ್ಪ ಹೊರಕೇರಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕನ್ನಡ ಜಾನಪದ ಪರಿಷತ್ ಅಧ್ಯಕ್ಷ ಡಿ.ಎಂ. ಸಾಹುಕಾರ ನೂತನ ಪದಾಧಿಕಾರಿಗಳಿಗೆ ಪ್ರಮಾಣಪತ್ರ ವಿತರಿಸಿ ಪದಗ್ರಹಣ ನೆರವೇರಿಸಿದರು.

 ನಿವತ್ತ ಶಿಕ್ಷಣ ಇಲಾಖೆಯ ನಿರ್ದೇಶಕ ಸಿದ್ದರಾಮ ಮನಹಳ್ಳಿ ಮಾತನಾಡಿದರು. ಜಾನಪದ ವಿದ್ವಾಂಸ ಶಂಭು ಬಳಿಗಾರ ವಿಶೇಷ ಉಪನ್ಯಾಸ ನೀಡಿ ಜಾನಪದ ಪರಂಪರೆಯ ಮಹತ್ವವನ್ನು ತಿಳಿಸಿದರು.

 ಸಿದ್ದನಗೌಡ ಪಾಟೀಲ, ಶರಣಗೌಡ ಪಾಟೀಲ, ಎಂ.ಡಿ. ಯಲಿಗಾರ, ಗಿರೀಶ ಗಾಣಿಗೇರ, ಬಸವರಾಜ ಗೊಣ್ಣಾಗರ, ವೀರಣ್ಣ ಹೊರಕೇರಿ, ಹಣಮಪ್ಪ ಹೊರಕೇರಿ, ವೆಂಕನಗೌಡ ಪಾಟೀಲ, ಹಣಮಂತ ಮಾಗಿ ಹಾಗೂ ತಾಲೂಕು ಘಟಕದ ಅಧ್ಯಕ್ಷ ಅಂದಪ್ಪ ದಂಡಿನ ಸೇರಿ ಪರಿಷತ್ ಪದಾಧಿಕಾರಿಗಳು, ಗಣ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ಬಾದಾಮಿ ತಾಲೂಕಿನ ಢಾಣಕಶಿರೂರ ಗ್ರಾಮದಲ್ಲಿ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಕನ್ನಡ ಜಾನಪದ ಪರಿಷತ್ ಮತ್ತು ಕಲ್ಮೇಶ್ವರ ಭಜನಾ ಸಂಘದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಪರಿಷತ್ ಪದಾಧಿಕಾರಿಗಳ ಪದಗ್ರಹಣ ಹಾಗೂ ’ಜನಪದ ಸಂಭ್ರಮ-2026’ ಕಾರ್ಯಕ್ರಮವನ್ನು ಅಧ್ಯಕ್ಷ ಡಾ. ಎಸ್. ಬಾಲಾಜಿ ಉದ್ಘಾಟಿಸಿದರು. ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳು, ಜಿಲ್ಲಾ ಕನ್ನಡ ಜಾನಪದ ಪರಿಷತ್ ಅಧ್ಯಕ್ಷ ಡಿ.ಎಂ. ಸಾಹುಕಾರ, ಸಿದ್ದರಾಮ ಮನಹಳ್ಳಿ, ಜಾನಪದ ವಿದ್ವಾಂಸ ಶಂಭು ಬಳಿಗಾರ ಇತರರಿದ್ದರು.
Published on: 