ಮಾತೃಭಾಷ ಕನ್ನಡಕ್ಕೆ ಮೊದಲ ಆದ್ಯತೆ

ಶಾಸಕ ಜಗದೀಶ ಗುಡಗುಂಟಿ ಅಭಿಮತ * 4ರಂದು 10ನೇ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಚಾರ ಸಾಮಗ್ರಿ ಬಿಡುಗಡೆ
ಜಮಖಂಡಿ: ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ಹಾಗೂ ತಾಲೂಕು ಘಟಕ ಆಶ್ರಯದಲ್ಲಿ ಜಮಖಂಡಿ ತಾಲೂಕು 10ನೇ ಕನ್ನಡ ಸಾಹಿತ್ಯ ಸಮ್ಮೇಳನ ಅ.4ರಂದು ನಗರದ ಬಸವ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸ್ವಾಗತ ಸಮಿತಿಯ ಅಧ್ಯಕ್ಷ ನಾಡೋಜ ಜಗದೀಶ ಗುಡಗುಂಟಿ ಹೇಳಿದರು.

 ನಗರದ ಶಾಸಕರ ಗೃಹ ಕಚೇರಿ ಸಾಕ್ಷಾತ್ಕಾರ ಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಸಮ್ಮೇಳನದ ಪ್ರಚಾರ ಸಾಮಗ್ರಿಗಳನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

 ಇಂದಿನ ದಿನಮಾನಗಳಲ್ಲಿ ಹಳ್ಳಿಗಳಲ್ಲೂ ಇಂಗ್ಲಿಷ ವ್ಯಾಮೋಹ ಹೆಚ್ಚಾಗುತ್ತಿರುವುದು ಕಳವಳಕಾರಿ ಸಂಗತಿ. ಕರ್ನಾಟಕದಲ್ಲಿ ಶೇ. 98ರಷ್ಟು ಜನರು ಇಲ್ಲೇ ಬದುಕು ಸಾಗಿಸಬೇಕಾಗಿದೆ. ಮಕ್ಕಳಿಗೆ ತಮ್ಮ ಭಾವನೆಗಳನ್ನು ಮುಕ್ತವಾಗಿ ಹಂಚಿಕೊಳ್ಳಲು ಮತ್ತು ಬುದ್ಧಿಮತ್ತೆಯ ವಿಕಾಸಕ್ಕೆ ಮಾತೃಭಾಷೆಯೇ ಶ್ರೇಷ್ಠ. ರಾಜ್ಯದ ಪ್ರತಿಯೊಬ್ಬರೂ 1ರಿಂದ 6ನೇ ತರಗತಿಯವರೆಗೆ ಕಡ್ಡಾಯವಾಗಿ ಕನ್ನಡ ಮಾಧ್ಯಮದಲ್ಲೇ ಕಲಿಯಬೇಕು. ಈ ನಿಟ್ಟಿನಲ್ಲಿ ಸರ್ಕಾರ ನಿಯಮ ರೂಪಿಸಬೇಕು. ಕನ್ನಡವನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯ ಎಂದರು.

 ಅ. 4ರಂದು ಬೆಳಗ್ಗೆ 7 ಗಂಟೆಗೆ ಧ್ವಜಾರೋಹಣದೊಂದಿಗೆ ಸಮ್ಮೇಳನಕ್ಕೆ ಚಾಲನೆ ದೊರೆಯಲಿದೆ. ನಂತರ ಭವ್ಯ ಮೆರವಣಿಗೆ, ಸಮ್ಮೇಳನ ಉದ್ಘಾಟನೆ, ಮಹಿಳಾ ಹಾಗೂ ದಲಿತ ಸಾಹಿತ್ಯ ಗೋಷ್ಠಿ, ಕವಿಗೋಷ್ಠಿ, ವಿಶೇಷ ಉಪನ್ಯಾಸ, ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ ಹಾಗೂ ಸಮಾರೋಪ ಸಮಾರಂಭ ಜರುಗಲಿವೆ. ಸಂಜೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರದರ್ಶನಗೊಳ್ಳಲಿವೆ ಎಂದು ತಿಳಿಸಿದರು.

 ಕಸಾಪ ಜಿಲ್ಲಾಧ್ಯಕ್ಷ ಶಿವಾನಂದ ಶೆಲ್ಲಿಕೇರಿ ಮಾತನಾಡಿ, ಕನ್ನಡ ಭಾಷೆ ಮತ್ತು ಸಾಹಿತ್ಯ ಪ್ರಸಾರಕ್ಕಾಗಿ ಕಸಾಪ ನಿರಂತರವಾಗಿ ಶ್ರಮಿಸುತ್ತಿದೆ. ಈ ಐತಿಹಾಸಿಕ 10ನೇ ಸಮ್ಮೇಳನದ ಸವಿನೆನಪಿಗಾಗಿ, ಈವರೆಗೆ ಜರುಗಿದ ಎಲ್ಲಾ ಸಮ್ಮೇಳನಾಧ್ಯಕ್ಷರ ಭಾಷಣಗಳನ್ನು ಒಳಗೊಂಡ ಜಮಖಂಡಿ ಸಿರಿ ಎಂಬ ವಿಶೇಷ ಕೃತಿ ಸಮ್ಮೇಳನದಲ್ಲಿ ಲೋಕಾರ್ಪಣೆಗೊಳ್ಳಲಿದೆ ಎಂದರು. 

 ಕಸಾಪ ತಾಲೂಕು ಅಧ್ಯಕ್ಷ ಸಂತೋಷ ತಳಕೇರಿ ಮಾತನಾಡಿ, ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಕಂಪು ಪಸರಿಸುವ ಸಮ್ಮೇಳನಕ್ಕೆ ಸಾಹಿತ್ಯಾಸಕ್ತರು, ಎಲ್ಲ ಸಂಘ-ಸಂಸ್ಥೆಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

 ಕಾರ್ಯಾಧ್ಯಕ್ಷ ಶಿವಾನಂದ ಪಾಟೀಲ ಮಾತನಾಡಿ, ಇಂದಿನ ಯುವಪೀಳಿಗೆ ಮೊಬೈಲ್ ಮತ್ತು ಅನ್ಯಭಾಷಾ ವ್ಯಾಮೋಹದಿಂದ ದೂರವಾಗಿ, ಕನ್ನಡ ಸಾಹಿತ್ಯದಲ್ಲಿರುವ ಮಾನವೀಯ ಹಾಗೂ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದರು.

 ಮುಖಂಡರಾದ ನಾಗಪ್ಪ ಸನದಿ, ಬಸವರಾಜ ಕಡ್ಡಿ, ಡಾ.ಟಿ.ಪಿ.ಗಿರಡ್ಡಿ, ರುದ್ರಗೌಡ ಪಾಟೀಲ, ಬಿ.ಎನ್.ಅಸ್ಕಿ, ಕಾನಿಪ ಸಂಘದ ತಾಲೂಕು ಘಟಕದ ಅಧ್ಯಕ್ಷ ಲಕ್ಷ್ಮೀಕಾಂತ ದುದಗಿ, ಮಲ್ಲೇಶ ಆಳಗಿ, ನರಸಿಂಹ ಕಲ್ಲೊಳ್ಳಿ, ಪ್ರಭು ಹಿಡಕಲ್, ಉಮೇಶ ಸಿದರಡ್ಡಿ ಇದ್ದರು.
ಜಮಖಂಡಿಯಲ್ಲಿ ಗುರವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಸ್ವಾಗತ ಸಮಿತಿಯ ಅಧ್ಯಕ್ಷ ನಾಡೋಜ ಜಗದೀಶ ಗುಡಗುಂಟಿ ಪ್ರಚಾರ ಸಾಮಗ್ರಿಗಳನ್ನು ಬಿಡುಗಡೆಗೊಳಿಸಿದರು. ಶಿವಾನಂದ ಶೆಲ್ಲಿಕೇರಿ, ಶಿವಾನಂದ ಪಾಟೀಲ, ಸಂತೋಷ ತಳಕೇರಿ ಇತರರಿದ್ದರು.
Published on: 

ಜಮಖಂಡಿ: ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ಹಾಗೂ ತಾಲೂಕು ಘಟಕ ಆಶ್ರಯದಲ್ಲಿ ಜಮಖಂಡಿ ತಾಲೂಕು 10ನೇ ಕನ್ನಡ ಸಾಹಿತ್ಯ ಸಮ್ಮೇಳನ ಅ.4ರಂದು ನಗರದ ಬಸವ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸ್ವಾಗತ ಸಮಿತಿಯ ಅಧ್ಯಕ್ಷ ನಾಡೋಜ ಜಗದೀಶ ಗುಡಗುಂಟಿ ಹೇಳಿದರು.

ನಗರದ ಶಾಸಕರ ಗೃಹ ಕಚೇರಿ ಸಾಕ್ಷಾತ್ಕಾರ ಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಸಮ್ಮೇಳನದ ಪ್ರಚಾರ ಸಾಮಗ್ರಿಗಳನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಇಂದಿನ ದಿನಮಾನಗಳಲ್ಲಿ ಹಳ್ಳಿಗಳಲ್ಲೂ ಇಂಗ್ಲಿಷ ವ್ಯಾಮೋಹ ಹೆಚ್ಚಾಗುತ್ತಿರುವುದು ಕಳವಳಕಾರಿ ಸಂಗತಿ. ಕರ್ನಾಟಕದಲ್ಲಿ ಶೇ. 98ರಷ್ಟು ಜನರು ಇಲ್ಲೇ ಬದುಕು ಸಾಗಿಸಬೇಕಾಗಿದೆ. ಮಕ್ಕಳಿಗೆ ತಮ್ಮ ಭಾವನೆಗಳನ್ನು ಮುಕ್ತವಾಗಿ ಹಂಚಿಕೊಳ್ಳಲು ಮತ್ತು ಬುದ್ಧಿಮತ್ತೆಯ ವಿಕಾಸಕ್ಕೆ ಮಾತೃಭಾಷೆಯೇ ಶ್ರೇಷ್ಠ. ರಾಜ್ಯದ ಪ್ರತಿಯೊಬ್ಬರೂ 1ರಿಂದ 6ನೇ ತರಗತಿಯವರೆಗೆ ಕಡ್ಡಾಯವಾಗಿ ಕನ್ನಡ ಮಾಧ್ಯಮದಲ್ಲೇ ಕಲಿಯಬೇಕು. ಈ ನಿಟ್ಟಿನಲ್ಲಿ ಸರ್ಕಾರ ನಿಯಮ ರೂಪಿಸಬೇಕು. ಕನ್ನಡವನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯ ಎಂದರು.

ಅ. 4ರಂದು ಬೆಳಗ್ಗೆ 7 ಗಂಟೆಗೆ ಧ್ವಜಾರೋಹಣದೊಂದಿಗೆ ಸಮ್ಮೇಳನಕ್ಕೆ ಚಾಲನೆ ದೊರೆಯಲಿದೆ. ನಂತರ ಭವ್ಯ ಮೆರವಣಿಗೆ, ಸಮ್ಮೇಳನ ಉದ್ಘಾಟನೆ, ಮಹಿಳಾ ಹಾಗೂ ದಲಿತ ಸಾಹಿತ್ಯ ಗೋಷ್ಠಿ, ಕವಿಗೋಷ್ಠಿ, ವಿಶೇಷ ಉಪನ್ಯಾಸ, ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ ಹಾಗೂ ಸಮಾರೋಪ ಸಮಾರಂಭ ಜರುಗಲಿವೆ. ಸಂಜೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರದರ್ಶನಗೊಳ್ಳಲಿವೆ ಎಂದು ತಿಳಿಸಿದರು.

ಕಸಾಪ ಜಿಲ್ಲಾಧ್ಯಕ್ಷ ಶಿವಾನಂದ ಶೆಲ್ಲಿಕೇರಿ ಮಾತನಾಡಿ, ಕನ್ನಡ ಭಾಷೆ ಮತ್ತು ಸಾಹಿತ್ಯ ಪ್ರಸಾರಕ್ಕಾಗಿ ಕಸಾಪ ನಿರಂತರವಾಗಿ ಶ್ರಮಿಸುತ್ತಿದೆ. ಈ ಐತಿಹಾಸಿಕ 10ನೇ ಸಮ್ಮೇಳನದ ಸವಿನೆನಪಿಗಾಗಿ, ಈವರೆಗೆ ಜರುಗಿದ ಎಲ್ಲಾ ಸಮ್ಮೇಳನಾಧ್ಯಕ್ಷರ ಭಾಷಣಗಳನ್ನು ಒಳಗೊಂಡ ಜಮಖಂಡಿ ಸಿರಿ ಎಂಬ ವಿಶೇಷ ಕೃತಿ ಸಮ್ಮೇಳನದಲ್ಲಿ ಲೋಕಾರ್ಪಣೆಗೊಳ್ಳಲಿದೆ ಎಂದರು.

ಕಸಾಪ ತಾಲೂಕು ಅಧ್ಯಕ್ಷ ಸಂತೋಷ ತಳಕೇರಿ ಮಾತನಾಡಿ, ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಕಂಪು ಪಸರಿಸುವ ಸಮ್ಮೇಳನಕ್ಕೆ ಸಾಹಿತ್ಯಾಸಕ್ತರು, ಎಲ್ಲ ಸಂಘ-ಸಂಸ್ಥೆಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಕಾರ್ಯಾಧ್ಯಕ್ಷ ಶಿವಾನಂದ ಪಾಟೀಲ ಮಾತನಾಡಿ, ಇಂದಿನ ಯುವಪೀಳಿಗೆ ಮೊಬೈಲ್ ಮತ್ತು ಅನ್ಯಭಾಷಾ ವ್ಯಾಮೋಹದಿಂದ ದೂರವಾಗಿ, ಕನ್ನಡ ಸಾಹಿತ್ಯದಲ್ಲಿರುವ ಮಾನವೀಯ ಹಾಗೂ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದರು.

ಮುಖಂಡರಾದ ನಾಗಪ್ಪ ಸನದಿ, ಬಸವರಾಜ ಕಡ್ಡಿ, ಡಾ.ಟಿ.ಪಿ.ಗಿರಡ್ಡಿ, ರುದ್ರಗೌಡ ಪಾಟೀಲ, ಬಿ.ಎನ್.ಅಸ್ಕಿ, ಕಾನಿಪ ಸಂಘದ ತಾಲೂಕು ಘಟಕದ ಅಧ್ಯಕ್ಷ ಲಕ್ಷ್ಮೀಕಾಂತ ದುದಗಿ, ಮಲ್ಲೇಶ ಆಳಗಿ, ನರಸಿಂಹ ಕಲ್ಲೊಳ್ಳಿ, ಪ್ರಭು ಹಿಡಕಲ್, ಉಮೇಶ ಸಿದರಡ್ಡಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net