ಯುವಕರು ಭಾರತ ಜೋಡೊ ಯಾತ್ರೆಯಲ್ಲಿ ಪಾಲ್ಗೊಳ್ಳಲಿ

ಸಚಿವ ವಿಜಯಾನಂದ ಕಾಶಪ್ಪನವರ ಹೇಳಿಕೆ ಪ್ರಜಾಸೇವಾ ಆಂದೋಲನ ಸ್ಥಳದಲ್ಲಿಯೇ ಹಲವು ದೂರುಗಳಿಗೆ ಪರಿಹಾರ
ಬೀಳಗಿ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಪ್ರಜಾಸೇವಾ ಅಂದೋಲನ ಕಾರ್ಯಕ್ರಮವನ್ನು ಸಚಿವ ವಿಜಯಾನಂದ ಕಾಶಪ್ಪನವರ ಉದ್ಘಾಟಿಸಿದರು. ಶಾಸಕ ಜೆ.ಟಿ. ಪಾಟೀಲ, ಡಿಸಿ ಸಂಗಪ್ಪ ಎಂ, ಎಸ್‌ಪಿ ಸಿದ್ಧಾರ್ಥ ಗೋಯಲ್ ಇತರರಿದ್ದರು.
ಬೀಳಗಿ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಪ್ರಜಾಸೇವಾ ಅಂದೋಲನ ಕಾರ್ಯಕ್ರಮವನ್ನು ಸಚಿವ ವಿಜಯಾನಂದ ಕಾಶಪ್ಪನವರ ಉದ್ಘಾಟಿಸಿದರು. ಶಾಸಕ ಜೆ.ಟಿ. ಪಾಟೀಲ, ಡಿಸಿ ಸಂಗಪ್ಪ ಎಂ, ಎಸ್‌ಪಿ ಸಿದ್ಧಾರ್ಥ ಗೋಯಲ್ ಇತರರಿದ್ದರು.
Published on: 

ಬೀಳಗಿ: ಯುವಕರು ದುಶ್ಚಟಗಳಿಗೆ ಬಲಿಯಾಗದೆ ದೇಶ ಹಾಗೂ ನಾಡನ್ನು ಕಟ್ಟುವಂತಹ ಶಕ್ತಿವಂತರಾಗಬೇಕು. ಸಮಾಜಕ್ಕೆ ಮಾದರಿಯಾಗಲು ಯುವ ಜನತೆ ಭಾರತ ಜೋಡೊ ಯಾತ್ರೆಯಲ್ಲಿಪಾಲ್ಗೊಳ್ಳಬೇಕು ಎಂದು ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಹೇಳಿದರು.

ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪ್ರಜಾಸೇವಾ ಅಂದೋಲ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಸಾರ್ವಜನಿಕರ ಅಹವಾಲುಗಳಿಗೆ ಅಧಿಕಾರಿಗಳು ಸ್ಪಂದಿಸುವ ಕೆಲಸವಾಗಬೇಕು. ಅದಕ್ಕಾಗಿಯೇ ವಿವಿಧ ಇಲಾಖೆಗಳ ಸೇವೆಗಳು ನೇರವಾಗಿ ಸಾರ್ವಜನಿಕರಿಗೆ ತಲುಪಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಸಾರ್ವಜನಿಕರಿಂದ ವಿವಿಧ ಇಲಾಖೆಗೆ ಸಂಬಂಧಿಸಿದ ಅಹವಾಲುಗಳನ್ನು ಆಲಿಸಿ, ಹಲವು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸಾರ್ವಜನಿಕರು ತಮ್ಮ ಕೆಲಸಗಳಿಗಾಗಿ ಕಚೇರಿಗಳಿಗೆ ಪದೇಪದೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಬಾರದು. ಅರ್ಜಿಗಳನ್ನು ಸ್ವೀಕರಿಸಿ ಕಾಲಮಿತಿಯಲ್ಲಿ ವಿಲೇವಾರಿ ಮಾಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಶಾಸಕ ಜೆ.ಟಿ ಪಾಟೀಲ ಮಾತನಾಡಿ, ಕೇವಲ ಸಾರ್ವಜನಿಕರ ಅಹವಾಲುಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ಸ್ವೀಕರಿಸಿದರೆ ಸಾಲದು ನಿಗದಿತ ಅವಧಿಯಲ್ಲಿ ಅದಕ್ಕೆ ಪರಿಹಾರ ಒದಗಿಸುವ ಕೆಲಸವಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಮಂಟೂರು ಮಹಾಲಕ್ಷ್ಮೀ ಯೋಜನೆಯಿಂದ ನೀರು ಬಿಟ್ಟರೆ, ಈ ಭಾಗದ ರೈತರಿಗೆ ಅನುಕೂಲವಾಗಲಿದೆ. ತಾಲೂಕಿನ ಕೆರೆಗಳನ್ನು ತುಂಬಿಸುವ ಕೆಲಸವಾಗಬೇಕಿದೆ ಎಂದು ಸಚಿವರಿಗೆ ಕೇಳಿಕೊಂಡರು. ನಂತರ ನಡೆದ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ವಿರುಪಾಕ್ಷಯ್ಯ ಹಿರೇಮಠ ಸಭೆಯಲ್ಲಿ ಸಚಿವರ ಗಮನಕ್ಕೆ ತಂದು ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಬಸ್ ಸಂಚಾರಕ್ಕೆ ಸೂಚನೆ ನೀಡಿದರೆ.

ವಿಜಯಪುರದಿಂದ ಹುಬ್ಬಳ್ಳಿಗೆ ಸಂಚರಿಸುವ ಬಸ್‌ಗಳು ಬೀಳಗಿ ಪಟ್ಟಣದೊಳಗೆ ಸಂಚರಿಸುವಂತೆ ಕ್ರಮ ಕೈಗೊಂಡು ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದರು.

ನೀರಾವರಿ ಇಲಾಖೆ ಹಿರಿಯ ಅಧಿಕಾರಿಗಳು ಸಭೆಗೆ ಹಾಜರಾಗದ ಹಿನ್ನೆಲೆಯಲ್ಲಿ ಸಚಿವರು ಅಸಮಾಧಾನ ವ್ಯಕ್ತಪಡಿಸಿದರು. ಕೆನಾಲ್‌ಗೆ ನೀರು ಬಿಡುಗಡೆಯಾಗದೆ ರೈತರಿಗೆ ತೊಂದರೆಯಾಗುತ್ತಿದೆ ಎಂಬ ರೈತರ ಅಹವಾಲಿನ ಹಿನ್ನೆಲೆಯಲ್ಲಿ, ಸ್ಥಳದಲ್ಲಿದ್ದ ಅಧಿಕಾರಿ ಬಸವರಾಜ ಬಂಕಾಪುರ ಅವರನ್ನು ಸಚಿವರು ತರಾಟೆಗೆ ತೆಗೆದುಕೊಂಡು, ತ್ವರಿತವಾಗಿ ಕೆನಾಲ್‌ಗೆ ನೀರು ಬಿಡುಗಡೆ ಮಾಡುವ ಕುರಿತು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

ಸರ್ಕಾರಿ ಆಸ್ಪತ್ರೆ ಹತ್ತಿರದ ಆಶ್ರಯ ಕಾಲೋನಿಯಲ್ಲಿ ಯಾವುದೇ ಮೂಲಸೌಕರ್ಯಗಳು ಇಲ್ಲದೇ ಸುಮಾರು 20 ಜನ ಕುಟುಂಬದವರು ವಾಸವಾಗಿದ್ದರೆ ಅಲ್ಲಿ ರಸ್ತೆ, ವಿದ್ಯುತ್, ನೀರು ಇಲ್ಲದೇ ಜನರು ಪರದಾವಂತ್ತಾಗಿದೆ ತಾತ್ಕಾಲಿಕ ರಸ್ತೆ, ವಿದ್ಯುತ್ ಪೂರೈಕೆ ಮಾಡಬೇಕೆಂದು ಅಲ್ಲಿಯ ನಿವಾಸಿ ಹಣಮಂತ ಹಂಚಿನಾಳ ಸಚಿವರ ಗಮನಕ್ಕೆ ತಂದರು.

300ಕ್ಕೂ ಹೆಚ್ಚು ಅರ್ಜಿಗಳು ಸ್ವೀಕೃತಗೊಂಡಿದ್ದವು. ಕೆಲವು ಅಹವಾಲುಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಲು ಕ್ರಮ ಕೈಗೊಂಡ ಸಚಿವರು, ಇನ್ನು ಕೆಲವು ಪ್ರಕರಣಗಳನ್ನು ಜಿಲ್ಲಾ ಮಟ್ಟದ ಅಧಿಕಾರಿಗಳ ಗಮನಕ್ಕೆ ತಂದು ಕಾಲಮಿತಿಯಲ್ಲಿ ಬಗೆಹರಿಸುವಂತೆ ಸೂಚಿಸಿದರು.

ಶಾಸಕ ಜೆ.ಟಿ.ಪಾಟೀಲ, ಗ್ಯಾರಂಟಿ ಯೋಜನೆ ಸಮಿತಿ ಜಿಲ್ಲಾ ಅಧ್ಯಕ್ಷ ಅನೀಲಕುಮಾರ ದಡ್ಡಿ, ಡಿಸಿ ಸಂಗಪ್ಪ, ಎಸ್.ಪಿ ಸಿದ್ಧಾರ್ಥ ಗೋಯಲ್, ಸ್ವಪ್ನಿಲ್ ಅಹಿರೇ, ಜಿ.ಪಂ ಉಪ ಕಾರ್ಯದರ್ಶಿ ಎನ್.ವೈ. ಬಸರಿಗಿಡದ, ಎಸಿ ಶ್ವೇತಾ ಬೀಡಿಕರ, ಆನಂದ ಕೆಸನೂರ, ತಹಸೀಲ್ದಾರ್ ವಿನೋದ ಹತ್ತಳ್ಳಿ, ಪಪಂ ಮುಖ್ಯಾಧಿಕಾರಿ ದೇವೇಂದ್ರ ಧನಪಾಲ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net