ಶಿಬಿರಗಳಿಂದ ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯ ವೃದ್ಧಿ

ಡಾ. ಎಸ್.ಎಲ್. ಪಾಟೀಲ ಹೇಳಿಕೆ ರಾಷ್ಟ್ರೀಯ ಸೇವಾ ದಿನ ಆಚರಣೆ
ಹುನಗುಂದ: ಇಂದಿನ ಯುವ ಜನತೆ ದೇಶದ ಭವಿಷ್ಯ, ಶಿಕ್ಷಣದ ಜೊತೆಗೆ ಸಾಮಾಜಿಕ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳುವುದು ಅತ್ಯಂತ ಅಗತ್ಯ. ಸ್ವಚ್ಛತೆ, ಪರಿಸರ ಸಂರಕ್ಷಣೆ, ಜಲ ಸಂರಕ್ಷಣೆ, ಆರೋಗ್ಯ ಜಾಗೃತಿ, ರಕ್ತದಾನ, ಗ್ರಾಮೀಣ ಅಭಿವೃದ್ಧಿ, ಮಹಿಳಾ ಸಬಲೀಕರಣ ಹಾಗೂ ಸಾಮಾಜಿಕ ಸಾಮರಸ್ಯದಂತಹ ಕ್ಷೇತ್ರಗಳಲ್ಲಿ ಸ್ವಯಂ ಸೇವಕರು ಮಹತ್ವದ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಹಡಲಗೇರಿ ವಸತಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎಸ್.ಎಲ್. ಪಾಟೀಲ ಹೇಳಿದರು.

ಪಟ್ಟಣದ ವಿ.ಎಂ.ಕೆ.ಎಸ್.ಆರ್.ವಸ್ತ್ರದ ಕಲಾ, ವಿಜ್ಞಾನ ಹಾಗೂ ವಿ.ಎಸ್.ಬೆಳ್ಳಿಹಾಳ ವಾಣಿಜ್ಯ ಮಹಾವಿದ್ಯಾಲಯದ ಎನ್.ಎಸ್.ಎಸ್. ಘಟಕದ ಆಶ್ರಯದಲ್ಲಿ ಶನಿವಾರ ಹಮ್ಮಿಕೊಂಡ ರಾಷ್ಟ್ರೀಯ ಸೇವಾ ದಿನಾಚರಣೆಯ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು, ಶಿಬಿರಗಳು ವಿದ್ಯಾರ್ಥಿಗಳಿಗೆ ಕೇವಲ ಪುಸ್ತಕದ ಜ್ಞಾನವನ್ನು ನೀಡುವುದಿಲ್ಲ. ಅವು ಜೀವನದ ಅನುಭವ ಮತ್ತು ಮಾನವೀಯ ಮೌಲ್ಯಗಳನ್ನು ಕಲಿಸುತ್ತವೆ ಎಂದು ತಿಳಿಸಿದರು.

ಎನ್‌ಎಸ್‌ಎಸ್ ಸ್ವಯಂ ಸೇವಕ ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿನ ಜನರೊಂದಿಗೆ ಬೆರೆತು ಕೆಲಸ ಮಾಡುವುದರಿಂದ ಗ್ರಾಮಗಳ ನೈಜ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಸಾಧ್ಯ. ಸೇವೆಯನ್ನು ಸೇವಾ ಮನೋಭಾವನೆಯಿಂದ ಮಾಡಬೇಕೇ ವಿನಃ ಪ್ರತಿಲದ ನಿರೀಕ್ಷೆಯಿಂದಲ್ಲ ಎಂದರು.

ವಿ.ಮ.ವಿ.ವ. ಸಂಘದ ಗೌರವ ಕಾರ್ಯದರ್ಶಿ ಡಾ. ಮಹಾಂತೇಶ ಕಡಪಟ್ಟಿ ಮಾತನಾಡಿ, ಎನ್‌ಎಸ್‌ಎಸ್ ವಿದ್ಯಾರ್ಥಿಗಳಲ್ಲಿ ಸೇವೆ, ಶಿಸ್ತು, ನಾಯಕತ್ವ, ಸಾಮಾಜಿಕ ಜವಾಬ್ದಾರಿ ಮತ್ತು ರಾಷ್ಟ್ರಪ್ರೇಮ ಬೆಳೆಸುತ್ತದೆ. ಸಮಾಜದಿಂದ ನಾವು ಪಡೆದದ್ದನ್ನು ಸಮಾಜಕ್ಕೆ ಮರಳಿ ನೀಡುವ ಮನೋಭಾವವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವುದು ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು.

ಪ್ರಾಚಾರ್ಯ ಎಸ್.ಆರ್. ಗೋಲಗೊಂಡ ಮಾತನಾಡಿ, ವಿದ್ಯಾರ್ಥಿಗಳು ಅಧ್ಯಯನದ ಜೊತೆಯಲ್ಲಿ ಸೇವಾಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದರು.

ಲೆಫ್ಟಿನೆಂಟ್ ಎಸ್.ಬಿ. ಚಳಗೇರಿ ಅತಿಥಿಗಳನ್ನು ಸ್ವಾಗತಿಸಿ ಪರಿಚಯಿಸಿದರು, ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಡಾ. ಎಸ್.ಆರ್.ನಾಗಣ್ಣವರ ಪ್ರಾಸ್ತಾವಿಕ ಮಾತನಾಡಿದರು. ಡಾ. ಎಲ್.ಎನ್. ಕುಲಕರ್ಣಿ, ಡಾ. ತಿಪ್ಪೇಸ್ವಾಮಿ ಡಿ.ಎಸ್, ಶ್ರೀನಿಧಿ ಆರ್.ಎ, ಎ.ಎಲ್.ಬಾದಾಮಿ ಇತರರಿದ್ದರು.
ಹುನಗುಂದದ ವಿ.ಎಂ.ಕೆ.ಎಸ್.ಆರ್.ವಸ್ತ್ರದ ಕಲಾ, ಮಹಾವಿದ್ಯಾಲಯದ ಎನ್‌ಎಸ್‌ಎಸ್ ಘಟಕದ ಆಶ್ರಯದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಸೇವಾ ದಿನಾಚರಣೆಯಲ್ಲಿ ಡಾ. ಎಸ್.ಎಲ್. ಪಾಟೀಲ ಮಾತನಾಡಿದರು. ಪ್ರಾಚಾರ್ಯ ಎಸ್.ಆರ್. ಗೋಲಗೊಂಡ , ಎಸ್.ಬಿ. ಚಳಗೇರಿ, ಡಾ. ಎಸ್.ಆರ್. ನಾಗಣ್ಣವರ ಇತರರಿದ್ದರು.
Published on: 

ಹುನಗುಂದ: ಇಂದಿನ ಯುವ ಜನತೆ ದೇಶದ ಭವಿಷ್ಯ, ಶಿಕ್ಷಣದ ಜೊತೆಗೆ ಸಾಮಾಜಿಕ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳುವುದು ಅತ್ಯಂತ ಅಗತ್ಯ. ಸ್ವಚ್ಛತೆ, ಪರಿಸರ ಸಂರಕ್ಷಣೆ, ಜಲ ಸಂರಕ್ಷಣೆ, ಆರೋಗ್ಯ ಜಾಗೃತಿ, ರಕ್ತದಾನ, ಗ್ರಾಮೀಣ ಅಭಿವೃದ್ಧಿ, ಮಹಿಳಾ ಸಬಲೀಕರಣ ಹಾಗೂ ಸಾಮಾಜಿಕ ಸಾಮರಸ್ಯದಂತಹ ಕ್ಷೇತ್ರಗಳಲ್ಲಿ ಸ್ವಯಂ ಸೇವಕರು ಮಹತ್ವದ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಹಡಲಗೇರಿ ವಸತಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎಸ್.ಎಲ್. ಪಾಟೀಲ ಹೇಳಿದರು.

ಪಟ್ಟಣದ ವಿ.ಎಂ.ಕೆ.ಎಸ್.ಆರ್.ವಸ್ತ್ರದ ಕಲಾ, ವಿಜ್ಞಾನ ಹಾಗೂ ವಿ.ಎಸ್.ಬೆಳ್ಳಿಹಾಳ ವಾಣಿಜ್ಯ ಮಹಾವಿದ್ಯಾಲಯದ ಎನ್.ಎಸ್.ಎಸ್. ಘಟಕದ ಆಶ್ರಯದಲ್ಲಿ ಶನಿವಾರ ಹಮ್ಮಿಕೊಂಡ ರಾಷ್ಟ್ರೀಯ ಸೇವಾ ದಿನಾಚರಣೆಯ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು, ಶಿಬಿರಗಳು ವಿದ್ಯಾರ್ಥಿಗಳಿಗೆ ಕೇವಲ ಪುಸ್ತಕದ ಜ್ಞಾನವನ್ನು ನೀಡುವುದಿಲ್ಲ. ಅವು ಜೀವನದ ಅನುಭವ ಮತ್ತು ಮಾನವೀಯ ಮೌಲ್ಯಗಳನ್ನು ಕಲಿಸುತ್ತವೆ ಎಂದು ತಿಳಿಸಿದರು.

ಎನ್‌ಎಸ್‌ಎಸ್ ಸ್ವಯಂ ಸೇವಕ ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿನ ಜನರೊಂದಿಗೆ ಬೆರೆತು ಕೆಲಸ ಮಾಡುವುದರಿಂದ ಗ್ರಾಮಗಳ ನೈಜ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಸಾಧ್ಯ. ಸೇವೆಯನ್ನು ಸೇವಾ ಮನೋಭಾವನೆಯಿಂದ ಮಾಡಬೇಕೇ ವಿನಃ ಪ್ರತಿಲದ ನಿರೀಕ್ಷೆಯಿಂದಲ್ಲ ಎಂದರು.

ವಿ.ಮ.ವಿ.ವ. ಸಂಘದ ಗೌರವ ಕಾರ್ಯದರ್ಶಿ ಡಾ. ಮಹಾಂತೇಶ ಕಡಪಟ್ಟಿ ಮಾತನಾಡಿ, ಎನ್‌ಎಸ್‌ಎಸ್ ವಿದ್ಯಾರ್ಥಿಗಳಲ್ಲಿ ಸೇವೆ, ಶಿಸ್ತು, ನಾಯಕತ್ವ, ಸಾಮಾಜಿಕ ಜವಾಬ್ದಾರಿ ಮತ್ತು ರಾಷ್ಟ್ರಪ್ರೇಮ ಬೆಳೆಸುತ್ತದೆ. ಸಮಾಜದಿಂದ ನಾವು ಪಡೆದದ್ದನ್ನು ಸಮಾಜಕ್ಕೆ ಮರಳಿ ನೀಡುವ ಮನೋಭಾವವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವುದು ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು.

ಪ್ರಾಚಾರ್ಯ ಎಸ್.ಆರ್. ಗೋಲಗೊಂಡ ಮಾತನಾಡಿ, ವಿದ್ಯಾರ್ಥಿಗಳು ಅಧ್ಯಯನದ ಜೊತೆಯಲ್ಲಿ ಸೇವಾಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದರು.

ಲೆಫ್ಟಿನೆಂಟ್ ಎಸ್.ಬಿ. ಚಳಗೇರಿ ಅತಿಥಿಗಳನ್ನು ಸ್ವಾಗತಿಸಿ ಪರಿಚಯಿಸಿದರು, ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಡಾ. ಎಸ್.ಆರ್.ನಾಗಣ್ಣವರ ಪ್ರಾಸ್ತಾವಿಕ ಮಾತನಾಡಿದರು. ಡಾ. ಎಲ್.ಎನ್. ಕುಲಕರ್ಣಿ, ಡಾ. ತಿಪ್ಪೇಸ್ವಾಮಿ ಡಿ.ಎಸ್, ಶ್ರೀನಿಧಿ ಆರ್.ಎ, ಎ.ಎಲ್.ಬಾದಾಮಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net