ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲು ಆದ್ಯತೆ

ಸಚಿವ ವಿಜಯಾನಂದ ಕಾಶಪ್ಪನವರ ಹೇಳಿಕೆ
ಬಾಗಲಕೋಟೆ: ಸಣ್ಣ ಕೈಗಾರಿಕೆ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪಮನವರ ಬಲಿಪಾಢ್ಯ ದಿನವಾದ  ಮಂಗಳವಾರ ಜಿಲ್ಲಾಡಳಿತ ಭವನದ ಕೊಠಡಿ ಸಂಖ್ಯೆ 24ರಲ್ಲಿ ಆರಂಭಿಸಲಾಗಿರುವ ತಮ್ಮ ನೂತನ ಕಚೇರಿಯಲ್ಲಿ ಪೂಜೆ ಸಲ್ಲಿಸಿ ಕಚೇರಿ ಪ್ರವೇಶ ಮಾಡಿದರು.

 ಬಲಿಪಾಢ್ಯ ಹಾಗೂ ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ನೂತನ ಕಚೇರಿ ಕಾರ್ಯಾರಂಭಗೊಂಡಿದ್ದು, ಈ ಸಂದರ್ಭದಲ್ಲಿ ಬೀಳಗಿ ಶಾಸಕ ಜೆ.ಟಿ. ಪಾಟೀಲ, ಪಂಚ ಗ್ಯಾರಂಟಿ ಯೋಜನೆಯ ಜಿಲ್ಲಾಧ್ಯಕ್ಷ ಅನೀಲ ದಡ್ಡಿ, ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಕಾಶ ತಪಶೆಟ್ಟಿ, ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಉಪ ವಿಭಾಗಾಧಿಕಾರಿ ಮಹೇಶ ಮಾಲಗಿತ್ತಿ, ತಹಸೀಲ್ದಾರ ವಾಸುದೇವ ಸ್ವಾಮಿ ಭಾಗವಹಿಸಿದ್ದರು.

 ನೂತನ ಕಚೇರಿ ಕಾರ್ಯಾರಂಭದ ಬಳಿಕ ಮಾತನಾಡಿದ ಸಚಿವ ವಿಜಯಾನಂದ ಕಾಶಪ್ಪನವರು, ಜಿಲ್ಲೆಯ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳನ್ನು ಕೋರಿದರು. ಸಾರ್ವಜನಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಜಿಲ್ಲಾಧಿಕಾರಿಗಳ ಕಚೇರಿಯ ಸಮೀಪದಲ್ಲೇ ತಮ್ಮ ಕಚೇರಿ ಆರಂಭಿಸಲಾಗಿದೆ ಎಂದು ತಿಳಿಸಿದರು.

 ಸಾರ್ವಜನಿಕರು ತಮ್ಮ ಸಮಸ್ಯೆ ಹಾಗೂ ಅಹವಾಲುಗಳನ್ನು ಸಚಿವರ ಗಮನಕ್ಕೆ ತರಲು ಅವರನ್ನು ನೇರವಾಗಿ ಭೇಟಿಯಾಗಲು ಸಾಧ್ಯವಾಗುತ್ತಿಲ್ಲ ಎಂಬ ಕೊರಗು ಹಲವರಲ್ಲಿದೆ. ಈ ಕೊರಗನ್ನು ನಿವಾರಿಸುವ ನಿಟ್ಟಿನಲ್ಲಿ ನೂತನ ಕಚೇರಿ ಕಾರ್ಯನಿರ್ವಹಿಸಲಿದೆ ಎಂದು ಸಚಿವರು ಹೇಳಿದರು.

 ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸುವ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ನೇರವಾಗಿ ಸಚಿವರ ಗಮನಕ್ಕೆ ತಂದು ಪರಿಹಾರ ಪಡೆಯಲು ಅನುಕೂಲವಾಗುವಂತೆ, ವಾರದಲ್ಲಿ ಒಂದು ದಿನ  ಕಚೇರಿಯಲ್ಲಿ ಲಭ್ಯವಿದ್ದು, ಸಾರ್ವಜನಿಕರ ಅಹವಾಲುಗಳನ್ನು ಆಲಿಸುವುದಾಗಿ ಭರವಸೆ ನೀಡಿದರು.

  ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವುದು, ಸರ್ಕಾರದ ಯೋಜನೆಗಳು ಮತ್ತು ಸೌಲಭ್ಯಗಳು ಅರ್ಹ ಲಾನುಭವಿಗಳಿಗೆ ತಲುಪುವಂತೆ ನೋಡಿಕೊಳ್ಳುವುದು ನಮ್ಮ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಭವನದಲ್ಲೇ ಕಚೇರಿ ಆರಂಭಿಸಿರುವುದರಿಂದ ಜನರು ತಮ್ಮ ಅಹವಾಲು ಸುಲಭವಾಗಿ ಸಲ್ಲಿಸಲು ಅನುಕೂಲವಾಗಲಿದೆ ಎಂದು ಹೇಳಿದರು.
ಬಾಗಲಕೋಟೆ ಜಿಲ್ಲಾಡಳಿತ ಭವನದಲ್ಲಿ ನೂತನ ಕಚೇರಿಯಲ್ಲಿ ಸಚಿವ ವಿಜಯಾನಂದ ಕಾಶಪ್ಪನವರ ಪೂಜೆ ಸಲ್ಲಿಸಿದರು. ಜಿ.ಪಂ. ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ, ಜಿಲ್ಲಾಧಿಕಾರಿ ಸಂಗಪ್ಪ ಎಂ., ಇತರರಿದ್ದರು.
Published on: 