ಮೊದಲ ದಿನ ನೀರಸ ಪ್ರತಿಕ್ರಿಯೆ, ಸರ್ಕಾರಿ ಕಾಲೇಜಿನಲ್ಲಿ ಗುಲಾಬಿ ಸ್ವಾಗತ

BKT -1
Published on

ಬಾಗಲಕೋಟೆ: ಕೋವಿಡ್ ಹಿನ್ನೆಲೆಯಲ್ಲಿ ಅಂದಾಜು ಎಂಟು ತಿಂಗಳು ಬಳಿಕ ಪದವಿ ಕಾಲೇಜಿನ ಅಂತಿಮ ವರ್ಷದ ತರಗತಿಗಳು ಪುನಾರಂಭವಾದರೂ ಕಾಲೇಜುಗಳ ಕಡೆಗೆ ವಿದ್ಯಾರ್ಥಿಗಳು ಹೆಜ್ಜೆ ಹಾಕಲಿಲ್ಲ.

ಬಾಗಲಕೋಟೆ ಜಿಲ್ಲೆಯಲ್ಲಿ ಬಹುತೇಕ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಇಲ್ಲದೆ ಬಿಕೋ ಎನ್ನುತ್ತಿದ್ದ ದೃಶ್ಯ ಕಂಡು ಬಂದಿತು. ಬೋಧಕರು ಯಥಾರೀತಿ ಆನ್‌ಲೈನ್‌ನಲ್ಲಿ ಪಾಠ ಆರಂಭಿಸಿದರು.

ಇನ್ನು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೊದಲ ದಿನ ವಿದ್ಯಾರ್ಥಿಗಳಿಗೆ ಗುಲಾಬಿ ಸ್ವಾಗತ ನೀಡಲಾಯಿತು. ಒಟ್ಟು 400 ವಿದ್ಯಾರ್ಥಿಗಳ ಪೈಕಿ 10 ವಿದ್ಯಾರ್ಥಿಗಳು ಮಾತ್ರ ತರಗತಿಗೆ ಬಂದಿದ್ದರು. ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ಮಹಾವಿದ್ಯಾಲಯ ಅಭಿವೃದ್ಧಿ ಸಮಿತಿ ಸದಸ್ಯರು ಚಪ್ಪಾಳೆ ತಟ್ಟಿ ಅವರನ್ನು ಬರಮಾಡಿಕೊಂಡರು. ವಿದ್ಯಾರ್ಥಿಗಳಿಂದ ರಿಬ್ಬನ್ ಕಟ್ ಮಾಡಿಸಿ, ಗುಲಾಬಿ ಹೂವು ಕೊಟ್ಟು ಸ್ವಾಗತಿಸಿದರು.

ಜಿಲ್ಲೆಯಲ್ಲಿ ಅಂದಾಜು 25 ಸಾವಿರ ಅಂತಿಮ ವರ್ಷದ ವಿದ್ಯಾರ್ಥಿಗಳಿದ್ದರೂ ಮೊದಲ ದಿನ ಅಲ್ಲೊಬ್ಬರು ಇಲ್ಲೊಬ್ಬರು ವಿದ್ಯಾರ್ಥಿಗಳು ಮಾತ್ರ ಕಾಲೇಜಿಗೆ ಬಂದಿದ್ದರು.

ಈ ಹಿಂದೆ ಪ್ರವಾಸಿ ತಾಣ ಹಾಗೂ ದೇವಸ್ಥಾನಗಳು ಪುನರಾರಂಭ ಆದಾಗಲೂ ಸಹ ಮೊದಲ ಕೆಲ ದಿನ ಇದೇ ನೀರಸ ಪ್ರತಿಕ್ರಿಯೆ ಕಂಡು ಬಂದಿತ್ತು. ಕೆಲವು ದಿನಗಳ ಬಳಿಕ ಪರಿಸ್ಥಿತಿ ಸುಧಾರಿಸಿದ್ದು, ಕಾಲೇಜು ಪುನರಾರಂಭದಲ್ಲೂ ಹಾಗೆಯೇ ಆಗುತ್ತದೆ ಎಂದು ಹೇಳಲಾಗುತ್ತಿದೆ.

ಇನ್ನೂ ಸುರಕ್ಷತೆ ದೃಷ್ಟಿಯಿಂದ ಕಾಲೇಜುಗಳಲ್ಲಿ ಸಾನಿಟೈಸಿಂಗ್, ಥರ್ಮಲ್ ಸ್ಕ್ಯಾನ್ ವ್ಯವಸ್ಥೆ ಮಾಡಿದ್ದಾರೆ. ಕೋವಿಡ್ ಟೆಸ್ಟ್ ವರದಿ ಕಡ್ಡಾಯ ಮಾಡಿರುವುದು ಸಹ ವಿದ್ಯಾರ್ಥಿಗಳು ಬರುವುದು ಕಡಿಮೆ ಆಗಿದೆ ಎನ್ನಲಾಗುತ್ತಿದೆ.

EndFragment

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net