252 ಹೊಸ ಪ್ರಕರಣ ದೃಢ

captain dr k rajendra
Published on

ಬಾಗಲಕೋಟೆ: ಜಿಲ್ಲೆಯಲ್ಲಿ ಕೋವಿಡ್‌ನಿಂದ 455 ಜನ ಗುಣಮುಖರಾಗಿದ್ದು, ಹೊಸದಾಗಿ 252 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಚಿಕಿತ್ಸೆ ಫಲಕಾರಿಯಾಗದೇ ಮೂರು ಜನ ಸೋಂಕಿತರು ಶುಕ್ರವಾರ ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 32411 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 29041 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ಬಾಗಲಕೋಟೆ 76, ಬಾದಾಮಿ 46, ಜಮಖಂಡಿ 49, ಹುನಗುಂದ 42, ಮುಧೋಳ 28, ಬೀಳಗಿ ತಾಲೂಕಿನ 21 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದಾರೆ.

ಕೋವಿಡ್ ಲ್ಯಾಬ್‌ನಲ್ಲಿ ಪರೀಕ್ಷಿಸಲಾಗುತ್ತಿದ್ದ 2080 ಸ್ಯಾಂಪಲ್‌ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಇಲ್ಲಿಯವರೆಗೆ ಒಟ್ಟು 621578 ಸ್ಯಾಂಪಲ್ ಪರೀಕ್ಷಿಸಲಾಗಿದ್ದು. ಅದರಲ್ಲಿ 586291 ನೆಗಟಿವ್ ಪ್ರಕರಣ ಹಾಗೂ 273 ಮೃತ ಪ್ರಕರಣಗಳು ವರದಿಯಾಗಿರುತ್ತದೆ. ಇನ್ನು 3097 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 498 ಸ್ಯಾಂಪಲ್‌ಗಳು ಮಾತ್ರ ರಿಜೆಕ್ಟ ಆಗಿರುತ್ತವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net