20 ಹೊಸ ಪ್ರಕರಣಗಳು ದೃಢ

captain dr k rajendra
Published on

ಬಾಗಲಕೋಟೆ: ಜಿಲ್ಲೆಯಲ್ಲಿ ಮೂವರು ಕೋವಿಡ್‌ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದ್ದು, ಹೊಸದಾಗಿ 20 ಕೋವಿಡ್ ಪ್ರಕರಣ ಬುಧವಾರ ದೃಢಪಟ್ಟಿವೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 13860 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 13669 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 17, ಹುನಗುಂದದಲ್ಲಿ 2 ಹಾಗೂ ಮುಧೋಳದಲ್ಲಿ 1 ಪ್ರಕರಣ ಕಾಣಿಸಿಕೊಂಡಿದ್ದೆ. ಅದರಲ್ಲಿ ಮೂರು ಜನ ಜಿಲ್ಲಾ ಆಸ್ಪತ್ರೆಯಲ್ಲಿ, ಓರ್ವ ಖಾಸಗಿ ಆಸ್ಪತ್ರೆಯಲ್ಲಿ ಹಾಗೂ ಉಳಿದ 16 ಜನ ಹೋಮ್ ಐಸೋಲೇಶನ್‌ದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲಾ ಕೋವಿಡ್ ಲ್ಯಾಬ್‌ನಲ್ಲಿ ಪರೀಕ್ಷಿಸಲಾಗುತ್ತಿದ್ದ 1893 ಸ್ಯಾಂಪಲ್‌ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 426628 ಸ್ಯಾಂಪಲ್‌ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 410311 ನೆಗಟಿವ್ ಪ್ರಕರಣ 136 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 55 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿವರೆಗೆ ಒಟ್ಟು 462 ಸ್ಯಾಂಪಲ್‌ಗಳು ಮಾತ್ರ ರಿಜೆಕ್ಟ ಆಗಿರುತ್ತವೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.

EndFragment

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net