ನವಿಲುತೀರ್ಥ ಜಲಾಶಯದಿಂದ ನೀರು ಬಿಡುಗಡೆ

navilteerth_dam
Published on

ಬಾಗಲಕೋಟೆ: ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ನದಿ ಮತ್ತು ಎಡದಂಡೆ ಕಾಲುವೆಗೆ ನೀರು ಬಿಡುಗಡೆ ಮಾಡುವಂತೆ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಬಾದಾಮಿ ಕ್ಷೇತ್ರದ ಶಾಸಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮನವಿ ಮೇರೆಗೆ ನೀರು ಬಿಡುಗಡೆಗೆ ಪ್ರಾದೇಶಿಕ ಆಯುಕ್ತರು ಆದೇಶಿಸಿದ್ದು, ಮಂಗಳವಾರ ರಾತ್ರಿಯಿಂದಲೇ ನದಿ ಮತ್ತು ಕಾಲುವೆಗೆ ನೀರು ಹರಿಯಲಿದೆ. ಬಾದಾಮಿಯ ಬಹುತೇಕ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ತೀವ್ರ ಅಭಾವ ತಲೆದೋರಿದೆ. ಕೊಳವೆ ಬಾವಿಗಳಲ್ಲಿ ಅಂತರ್ಜಲ ಬತ್ತಿರುವುದರಿಂದ ಕುಡಿಯುವ ನೀರಿಗಾಗಿ ಜನತೆ ಪರದಾಡುವಂತಾಗಿದೆ.

ಈ ಹಿನ್ನೆಲೆಯಲ್ಲಿ ನವಿಲುತೀರ್ಥ ಜಲಾಶಯದಿಂದ ನೀರು ಬಿಡುಗಡೆ ಮಾಡುವಂತೆ ಸಿದ್ದರಾಮಯ್ಯ ಅವರು ಪ್ರಾದೇಶಿಕ ಆಯುಕ್ತ್ತ ಆದಿತ್ಯ ಆಮ್ಲಾ ಬಿಸ್ವಾಸ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಮನವಿ ಮಾಡಿದ್ದರು. ಸಿದ್ದರಾಮಯ್ಯ ಅವರ ಮನವಿಗೆ ತಕ್ಷಣ ಸ್ಪಂದಿಸಿದ ಪ್ರಾದೇಶಿಕ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net