121 ಹೊಸ ಪ್ರಕರಣಗಳು ದೃಢ

captain dr k rajendra
Published on

ಬಾಗಲಕೋಟೆ: ಜಿಲ್ಲೆಯಲ್ಲಿ 150 ಜನ ಕೋವಿಡ್‌ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆ ಮಾಡಲಾಗಿದ್ದು, ಹೊಸದಾಗಿ 121 ಜನರಿಗೆ ಕೋವಿಡ್ ಸೋಂಕು ಅಂಟಿಕೊಂಡಿದೆ. ಚಿಕಿತ್ಸೆ ಫಲಕಾರಿಯಾಗದೇ ಮೂರು ಜನರಿಗೆ ಕೋವಿಡ್ ಬುಧವಾರ ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 11190 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 10167 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 21, ಬಾದಾಮಿ 18, ಹುನಗುಂದ 24, ಬೀಳಗಿ 5, ಮುಧೋಳ 29, ಜಮಖಂಡಿ 24 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲಾ ಕೋವಿಡ್ ಲ್ಯಾಬ್‌ನಲ್ಲಿ ಪರಿಕ್ಷಿಸಲಾಗುತ್ತಿದ್ದ 1184 ಸ್ಯಾಂಪಲ್‌ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 119304 ಸ್ಯಾಂಪಲ್‌ಗಳನ್ನು ಪರೀಕ್ಷೆಸಲಾಗಿದ್ದು, ಈ ಪೈಕಿ 106419 ನೆಗಟಿವ್ ಪ್ರಕರಣ, 11190 ಪಾಜಿಟಿವ್ ಪ್ರಕರಣ ಹಾಗೂ 113 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 910 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 413 ಸ್ಯಾಂಪಲ್‌ಗಳು ಮಾತ್ರ ರಿಜೆಕ್ಟ ಆಗಿರುತ್ತವೆ. ಕಂಟೇನ್ಮೆಂಟ್ ರೆನ್ 438 ಇರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net