ಆಸ್ಪತ್ರೆಗೆ ಕಟ್ಟಡ ನಿರ್ಮಾಣಕ್ಕೆ ಅನುದಾನ ಮಂಜೂರು

12.ktal.01
Published on

ಕವಿತಾಳ: ಬಾಗಲವಾಡ ಹಾಗೂ ಕವಿತಾಳದಲ್ಲಿ ಆಯುಷ್ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಅನುದಾನ ಮಂಜೂರಾಗಿದೆ ಎಂದು ಶಾಸಕ ಹಂಪಯ್ಯ ನಾಯಕ ಹೇಳಿದರು.

ಪಟ್ಟಣಕ್ಕೆ ಶನಿವಾರ ಭೇಟಿ ನೀಡಿ, ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕಾಗಿ ಸ್ಥಳದ ಬಗ್ಗೆ ಜನರೊಂದಿಗೆ ಚರ್ಚಿಸಿದರು. ಮುರಾರ್ಜಿ ಶಾಲೆ ಹತ್ತಿರ ಸರ್ಕಾರಿ ಜಾಗ ಇದ್ದು, ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಪರಿಶೀಲಿಸಬೇಕೆಂದು ಸ್ಥಳೀಯರು ಶಾಸಕರನ್ನು ಕೋರಿದರು. ಸಾರ್ವಜನಿಕರ ಕೋರಿಕೆ ಮೇರೆಗೆ ಶಾಸಕ ಹಂಪಯ್ಯ ನಾಯಕ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಜಾಗ ಪರಿಶೀಲಿಸಿದರು.

ಜಿಲ್ಲಾ ಆಯುಷ್ ವೈದ್ಯಾಧಿಕಾರಿ ಶಂಕರಗೌಡ ಮಾತನಾಡಿ, ಶಾಸಕ ಸೂಚಿಸಿದ ಸ್ಥಳದಲ್ಲಿ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net