ಬಾಗೇವಾಡಿ ಗ್ರಾಪಂ ಅಧ್ಯಕ್ಷ ಹಣಜಿ

BAGEVADI
Published on

ಮುಂಡರಗಿ: ತಾಲೂಕಿನ ಬಾಗೇವಾಡಿ ಗ್ರಾಪಂ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಈರಪ್ಪ ಹಣಜಿ ಹಾಗೂ ಉಪಾಧ್ಯಕ್ಷೆಯಾಗಿ ತಿಪ್ಪವ್ವ ರೇವಣೆಪ್ಪ ತಳವಾರ ಅವರು ಮಂಗಳವಾರ ಅವಿರೋಧವಾಗಿ ಆಯ್ಕೆಯಾದರು.

ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ತಿಪ್ಪವ್ವ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ, ಅವಿರೋಧವಾಗಿ ಆಯ್ಕೆಯನ್ನು ಚುನಾವಣೆ ಅಧಿಕಾರಿ ವಿಶ್ವನಾಥ ಹೊಸಮನಿ ಘೋಷಿಸಿದರು. ಗ್ರಾ.ಪಂ.ಪಿಡಿಒ ಸಂತೋಷ ಮೇಟಿ ಇದ್ದರು.
ಶಾಸಕ ಡಾ.ಚಂದ್ರು ಲಮಾಣಿ ಹಾಗೂ ಬಿಜೆಪಿ ಮುಖಂಡರು ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಸನ್ಮಾನಿಸಿದರು.

ಡಾ.ಚಂದ್ರು ಲಮಾಣಿ ಮಾತನಾಡಿ, ಎಲ್ಲರೊಂದಿಗೆ ಹೊಂದಾಣಿಕೆಯಿಂದ ಗ್ರಾಮೀಣ ಭಾಗದ ಅಭಿವೃದ್ಧಿ ಪರ ಕೆಲಸ ಮಾಡಿಕೊಂಡು ಹೋಗಬೇಕು. ಗ್ರಾಪಂ ಮಟ್ಟದಲ್ಲಿ ಉತ್ತಮ ಕೆಲಸ ನಡೆಯಬೇಕು ಎಂದು ಸಲಹೆ ನೀಡಿದರು.

ಗ್ರಾಪಂ ಸದಸ್ಯರಾದ ಪ್ರಕಾಶ ಕೊಡ್ಲಿ, ರಾಮಣ್ಣ ಬಂಡಿವಡ್ಡರ, ರೇಣುಕಾ ಲಮಾಣಿ, ಶಕುಂತಲಾ ಪಾಟೀಲ, ಬಿಜೆಪಿ ಮುಖಂಡರಾದ ಕರಬಸಪ್ಪ ಹಂಚಿನಾಳ, ರವೀಂದ್ರ ಉಪ್ಪಿನಬೆಟಗೇರಿ, ಡಾ.ಕುಮಾರಸ್ವಾಮಿ ಹಿರೇಮಠ, ದೇವಪ್ಪ ಕಂಬಳಿ, ಕೊಟ್ರೇಶ ಅಂಗಡಿ, ಸಿದ್ದೇಶಪ್ಪ ತಳವಾರ, ಶಿವನಗೌಡ ಗೌಡರ, ದೇವಪ್ಪ ಇಟಗಿ, ಕವಿತಾ ಉಳ್ಳಾಗಡ್ಡಿ, ಶ್ರೀನಿವಾಸ ಅಬ್ಬಿಗೇರಿ, ಎಚ್. ವಿರೂಪಾಕ್ಷಗೌಡ್ರ, ಹನುಮಂತ ಪೂಜಾರ, ಸುಭಾಸ ಕ್ವಾಟಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net