

ಹುಬ್ಬಳ್ಳಿ: ಇಲ್ಲಿಯ ಉಣಕಲ್ ಕೆರೆ ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಭಾನುವಾರ ಬಾಗಿನ ಅರ್ಪಿಸಲಾಯಿತು.
ಸಭಾಪತಿ ಬಸವರಾಜ ಹೊರಟ್ಟಿ, ಶಾಸಕ ಮಹೇಶ ಟೆಂಗಿನಕಾಯಿ ಅವರು ಸುಳ್ಳದ ಶ್ರೀ ಸಿದ್ಧರಾಮೇಶ್ವರ ಸ್ವಾಮೀಜಿ ಸಾನ್ನಿಧ್ಯದಲ್ಲಿ ಬಾಗಿನ ಅರ್ಪಿಸಿದರು.
ಮೇಯರ್ ರಾಮಣ್ಣ ಬಡಿಗೇರ, ಉಪಮೇಯರ್ ದುರಗಮ್ಮ ಬಿಜವಾಡ, ಪಾಲಿಕೆ ಸದಸ್ಯರಾದ ರಾಜಣ್ಣ ಕೊರವಿ, ಉಮೇಶ ಕೌಜಗೇರಿ, ಇತರರು ಪಾಲ್ಗೊಂಡಿದ್ದರು.