ಬಹು ಅಂಗಾಗ ವೈಲ್ಯದಿಂದ ಹುಲಿ ಸಾವು

24Anand4
Published on

ಬೆಳಗಾವಿ: ಸಮೀಪದ ಭೂತರಾಮನಹಟ್ಟಿ ಗ್ರಾಮದಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ಕಿರು ಮಗಾಲಯದಲ್ಲಿ ಇದ್ದ 13 ವರ್ಷ ಶೌರ್ಯ ಹೆಸರಿನ ಗಂಡು ಹುಲಿಯೊಂದು ಭಾನುವಾರ ಅಸುನೀಗಿದೆ. ಕಳೆದ 21 ದಿನಗಳಿಂದ ಮೈಕ್ರೊಪ್ಲಾಸ್ ಸೈಟಾಕ್ಝೊನೋಸಿಸ್ ವೈರಾಣು ರೋಗದಿಂದ ಬಳಲುತ್ತಿದ್ದ ಹುಲಿಗೆ ವನ್ಯಜೀವಿ ವೈದ್ಯ ತಜ್ಞರ ಸಲಹೆಯಂತೆ ಮಗಾಲಯದಲ್ಲೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಭಾನುವಾರ ಬೆಳಿಗ್ಗೆ ಚಿಕಿತ್ಸೆ ಲಕಾರಿಯಾಗದೇ ಸಾವನ್ನಪ್ಪಿದೆ ಎಂದು ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಮಾರಿಯಾ ಕ್ರಿಷ್ಟು ರಾಜಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ, ಗೌರವಪೂರ್ವಕವಾಗಿ ಮಗಾಲಯದ ಆವರಣದಲ್ಲೆ ಶೌರ್ಯನ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಮಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರು ಆಗಿರುವ ಮಾರಿಯಾ ಕ್ರಿಷ್ಟು ರಾಜಾ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಾಗರಾಜ ಬಾಳೆಹೊಸುರ, ವಲಯ ಅರಣ್ಯ ಅಧಿಕಾರಿ ಪವನ ಕುರನಿಂಗ ಮಗಾಲಯದ ವೈದ್ಯ ಡಾ.ನಾಗೇಶ ಹುಯಿಲಗೋಳ, ಪಶುವೈದ್ಯಕೀಯ ಇಲಾಖೆಯ ವೈದ್ಯ ಡಾ. ಪ್ರಶಾಂತ ಕಾಂಬಳೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net