ಜ. 17ರಂದು ‘ಬಹು ಸಂಸ್ಕೃತಿ ಉತ್ಸವ’ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Screenshot_20250116_175525_Samsung Notes
Published on



ಮಂಗಳೂರು : ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ದಕ್ಷಿಣ , ಉಡುಪಿ ಮತ್ತು ಕೊಡಗು ಜಿಲ್ಲಾಡಳಿತದ ವತಿಯಿಂದ ತುಳು, ಬ್ಯಾರಿ, ಕೊಂಕಣಿ, ಅರೆಭಾಷೆ, ಯಕ್ಷಗಾನ ಹಾಗೂ ಕೊಡವ ಸಾಹಿತ್ಯ ಅಕಾಡೆಮಿಗಳ ಸಹಭಾಗಿತ್ವದಲ್ಲಿ ಜ. 17ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಬಹು ಸಂಸ್ಕೃತಿ ಉತ್ಸವ ನಡೆಯಲಿದೆ. ಉತ್ಸವಕ್ಕೆ ಬೆಳಗ್ಗೆ 10 ಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪುಸ್ತಕ ಪ್ರದರ್ಶನ ಮಳಿಗೆ ಉದ್ಘಾಟಿಸಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ಎಸ್. ತಂಗಡಗಿ ಆಶಯ ಭಾಷಣ ಮಾಡಲಿದ್ದಾರೆ. ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಿದ್ದಾರೆ.
ಬಹು ಸಂಸ್ಕೃತಿ ಉತ್ಸವದ ಅಂಗವಾಗಿ ಮೂರು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಹಮ್ಮಿಕೊಂಡಿರುವ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದ್ದು, ‘ಕರ್ನಾಟಕಕ್ಕೆ ಒಡನಾಡಿ ಭಾಷಾ ಸಮುದಾಯಗಳ ಕೊಡುಗೆ’ ವಿಷಯದ ಬಗ್ಗೆ ವಿದ್ಯಾರ್ಥಿಗಳು ವಿಚಾರ ಮಂಡಿಸಲಿದ್ದಾರೆ . ಉತ್ಸವದ ಅಂಗವಾಗಿ ಸಾಯಂಕಾಲ 4.30ಕ್ಕೆ ಸಂತ ಅಲೋಶಿಯಸ್ ಪ.ಪೂ.ಕಾಲೇಜು ಆವರಣದಿಂದ ಮಂಗಳಾ ಕ್ರೀಡಾಂಗಣದವರೆಗೆ ವಿವಿಧ ಅಕಾಡೆಮಿಗಳ ಕಲಾ ತಂಡಗಳಿಂದ ಸಾಂಸ್ಕೃತಿಕ ಮೆರವಣಿಗೆ ನಡೆಯಲಿದೆ. ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.
ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ ಗಟ್ಟಿ ಕಾಪಿಕಾಡ್ ಮಾತನಾಡಿ ‘ ಕರ್ನಾಟಕದ ಬಹು ಸಂಸ್ಕೃತಿ ಮತ್ತು ಆಯಾಮದ ಬಗ್ಗೆ ತಿಳುವಳಿಕೆ ನೀಡುವ ಉದ್ದೇಶದಿಂದ ಬಹು ಸಂಸ್ಕೃತಿ ಉತ್ಸವ ಆಯೋಜಿಸಲಾಗಿದೆ ಎಂದರು.
ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮರ್ ಯು.ಎಚ್., ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸ್ಟಾೃನಿ ಅಳ್ವಾರಿಸ್,ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಜಿ.ಪಂ. ಸಿಇಒ ಡಾ. ಆನಂದ್, ಮನಪಾ ಆಯುಕ್ತ ಆನಂದ್ ಸಿ.ಎಲ್.ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net