ಬೈಕ್ ಕಳವು ಮಾಡಿದ್ದ ಆರೋಪಿ ಬಂಧನ

IMG-20210310-WA0361-696x390 (1) (1)
Published on

ಶಿವಮೊಗ್ಗ: ನಗರದಲ್ಲಿ ಬೈಕ್ ಕಳವು ಮಾಡಿದ್ದ ಆರೋಪಿಯನ್ನು ದೊಡ್ಡಪೇಟೆ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದು ಒಂದು ಲಕ್ಷ ರೂ. ಮೌಲ್ಯದ ಮೂರು ಬೈಕ್ ಜಪ್ತಿ‌ ಮಾಡಿದ್ದಾರೆ. 

ನಗರದ ಮಂಜುನಾಥ ಅಲಿಯಾಸ್ ಮಂಜ (30) ಬಂಧಿತ. ಮಂಗಳವಾರ ಎನ್.ಟಿ ರಸ್ತೆಯಲ್ಲಿ ನಿಲ್ಲಿಸಿದ್ದ ಬೈಕ್ ಕಳವು ಮಾಡಲಾಗಿತ್ತು. ಈ ಕುರಿತು ವಾಹನ ಕಳೆದುಕೊಂಡವರು ದೊಡ್ಡಪೇಟೆ ಠಾಣೆಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಾಗ ಮಂಜುನಾಥನ ಸುಳಿವು ಸಿಕ್ಕಿತ್ತು. ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮೂರು ಬೈಕ್ ಕಳವು ಮಾಡಿದ್ದನ್ನು ಒಪ್ಪಿಕೊಂಡಿದ್ದಾನೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net