ಮಂಗಳೂರು: ನಗರದ ಹೊರ ವಲಯದ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಮೀನು ಸಂಸ್ಕರಣಾ ಘಟಕದಲ್ಲಿ ರಾಸಾಯನಿಕ ಸೋರಿಕೆಯಾಗಿ 20 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೀನು ಸಂಸ್ಕರಣಾ ಘಟಕದಲ್ಲಿ 80 ಕೆಲಸ ಮಾಡುತ್ತಿದ್ದು, ಈ ಪೈಕಿ 20 ಮಂದಿ ಅಸ್ವಸ್ಥರಾಗಿದ್ದಾರೆ. ಪಣಂಬೂರು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.