ಆರೋಪಿಗಳು ತಲವಾರು ತೋರಿಸಿ ಬೆದರಿಕೆ ಹಾಕಿ ದೂರುದಾರರ ಮೇಲೆ ಹಲ್ಲೆ ನಡೆಸಿ ಗಾಯಗೊಳಿಸಿದ್ದು, ಪತ್ನಿ ಹಾಗೂ ಮಗನನ್ನು ಬಲವಂತವಾಗಿ ಅಪಹರಿಸಿ ಕೆಲ ಕಿಲೋಮೀಟರ್ ದೂರದಲ್ಲಿ ಬಿಟ್ಟು, ದೂರುದಾರರ ಕಾರು, ಕಾರಿನಲ್ಲಿದ್ದ ಸುಮಾರು 180 ಗ್ರಾಂ ಚಿನ್ನಾಭರಣ (ಅಂದಾಜು 20 ಲಕ್ಷ ರೂ. ಮೌಲ್ಯ), ಎರಡು ಮೊಬೈಲ್ ಫೋನ್‌ಗಳು ಹಾಗೂ ಕಾರು ಸೇರಿದಂತೆ ಒಟ್ಟು 23.10 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ದರೋಡೆ ಮಾಡಿಕೊಂಡು ಪರಾರಿಯಾಗಿದ್ದರು.