ಬಜರಂಗದಳ ಕಾರ್ಯಕರ್ತನ ಭೀಕರ ಹತ್ಯೆ; ಶಿವಮೊಗ್ಗದಲ್ಲಿ ಪರಿಸ್ಥಿತಿ ಉದ್ವಿಗ್ನ...

Murder
Published on

ಶಿವಮೊಗ್ಗ: ಬಜರಂಗದಳದ ಕಾರ್ಯಕರ್ತನನ್ನು ಭೀಕರವಾಗಿ ಹತ್ಯೆಗೈಯಲಾಗಿದ್ದು, ಶಿವಮೊಗ್ಗದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಶಿವಮೊಗ್ಗದ ಭಾರತಿ ಕಾಲನಿಯಲ್ಲಿ ಇಂದು ರಾತ್ರಿ ಈ ಕೊಲೆ ನಡೆದಿದೆ. ಬಜರಂಗದಳದ ಕಾರ್ಯಕರ್ತ ಹರ್ಷ (24) ಎಂಬಾತನನ್ನು ಭಾರತಿ ಕಾಲನಿಯಲ್ಲಿ ಅಟ್ಟಾಡಿಸಿಕೊಂಡು ಹೋದ ದುಷ್ಕರ್ಮಿಗಳು ಭರ್ಜಿಯಿಂದ ಚುಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ತೀವ್ರ ಗಾಯಗೊಂಡ ಹರ್ಷನನ್ನು ಕೂಡಲೇ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದರೂ ಬದುಕುಳಿಯಲಿಲ್ಲ. ವಿಷಯ ಎಲ್ಲೆಡೆ ಹಬ್ಬುತ್ತಿದ್ದಂತೆ ಆಸ್ಪತ್ರೆ ಬಳಿ ಅಪಾರ ಸಂಖ್ಯೆಯಲ್ಲಿ ಹಿಂದೂಪರ ಕಾರ್ಯಕರ್ತರು ಜಮಾಯಿಸಿದ್ದು, ಬಿಗುವಿನ ವಾತಾವರಣ ಉಂಟಾಗಿದೆ.

ಮತ್ತೊಂದೆಡೆ ಕೊಲೆ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಪರಿಸ್ಥಿತಿ ನಿಯಂತ್ರಿಸುವ ನಿಟ್ಟಿನಲ್ಲೂ ಮುನ್ನೆಚ್ಚರಿಕೆ ಕ್ರಮಕೈಗೊಂಡಿದ್ದಾರೆ. ಆಸ್ಪತ್ರೆ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವಹಿಸಲಾಗಿದೆ.

ಕೊಲೆ ಬಳಿಕ ಶಿವಮೊಗ್ಗದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗಿದ್ದು, ನಗರಾದ್ಯಂತ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ನಗರದ ಎಲ್ಲ ಶಾಲಾ-ಕಾಲೇಜುಗಳಿಗೂ ನಾಳೆ ರಜೆ ಎಂದು ಘೋಷಿಸಲಾಗಿದೆ. ಇನ್ನೊಂದೆಡೆ ಕೆಲವು ಕಡೆ ಕಲ್ಲು ತೂರಾಟ ಕೂಡ ನಡೆದಿದ್ದು, ಪರಿಸ್ಥಿತಿ ನಿಯಂತ್ರಿಸಲು ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net