ಮುಸ್ಲಿಂ ತುಷ್ಟೀಕರಣಕ್ಕಾಗಿ ಭಜರಂಗ ದಳ ನಿಷೇಧ ಪ್ರಸ್ತಾವ: ಸುನೀಲ್

udp-2-bajaranga dal
Published on

ಉಡುಪಿ: ಮುಸ್ಲಿಂ ತುಷ್ಟೀಕರಣಕ್ಕಾಗಿ ಕಾಂಗ್ರೆಸ್ ಪಕ್ಷ ದೇಶವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಪಿಎಫ್‌ಐ ಜೊತೆಗೆ ಭಜರಂಗ ದಳವನ್ನು ಹೋಲಿಕೆ ಮಾಡಿ ನಿಷೇಧ ಮಾಡುವ ಬಗ್ಗೆ ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಿದೆ. ಇದನ್ನು ಖಂಡಿಸಿ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಖಂಡನಾ ಸಭೆ ನಡೆಸಲಾಗುವುದು ಎಂದು ಭಜರಂಗ ದಳ ದಕ್ಷಿಣ ಪ್ರಾಂತ ಸಂಚಾಲಕ ಸುನೀಲ್ ಕೆ.ಆರ್. ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರೃದ ಬಳಿಕ ದೇಶ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವವರನ್ನು ಕಾಂಗ್ರೆಸ್ ನಿರಂತರ ಬೆಂಬಲಿಸುವ ಕೆಲಸ ಮಾಡಿದೆ. ಜಾತಿ, ಧರ್ಮದ ಆಧಾರದಲ್ಲಿ ದೇಶ ಒಡೆಯುವ ಕೆಲಸ ಮಾಡುತ್ತಿದ್ದ ಕಾಂಗ್ರೆಸ್‌ಗೆ ಮೇ 10ರಂದು ನಡೆಯುವ ಚುನಾವನೆಯಲ್ಲಿ ಹಿಂದೂ ಸಮಾಜ ತಕ್ಕ ಉತ್ತರ ನೀಡಲಿದೆ. ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಗ್ರಾಮ ಗ್ರಾಮಗಳಲ್ಲಿ ಹಿಂದೂ ಸಮಾಜವನ್ನು ಜಾಗೃತಿಗೊಳಿಸಲಾಗುವುದು ಎಂದರು.

ಪಿಎಫ್‌ಐ ಸಂಘಟನೆಯನ್ನು ಈಗಾಗಲೇ ಕೇಂದ್ರ ಸರ್ಕಾರ ಬ್ಯಾನ್ ಮಾಡಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದು ನಿಷೇಧಿಸುವಂತದ್ದು ಏನಿದೆ. ಪ್ರಣಾಳಿಕೆ ಮಾಡಿದವರಿಗೆ ಸ್ವಲ್ಪನಾದರೂ ಕಾಮನ್ ಸೆನ್ಸ್ ಬೇಡವೇ ಎಂದು ಪ್ರಶ್ನಿಸಿದರು.
ಜಿಲ್ಲಾ ಸಂಚಾಲಕ ಭುಜಂಗ ಕುಲಾಲ್, ಪ್ರಾಂತ ಸಹ ಸಂಚಾಲಕ ದಿನೇಶ್ ಮೆಂಡನ್, ದ.ಕ. ಜಿಲ್ಲಾ ಸಂಚಾಲಕ ಪುನೀತ್ ಅತ್ತಾವರ, ನವೀನ್, ಚೇತನ್ ಮೊದಲಾದವರು ಉಪಸ್ಥಿತರಿದ್ದರು.

ಭಜರಂಗದಳ ಬ್ಯಾನ್ ಮಾಡುವ ಪ್ರಸ್ತಾಪವನ್ನು ವಿರೋಧಿಸಿ ಕಡಿಯಾಳಿಯಲ್ಲಿ ಭಜರಂಗದಳ ಕಾರ್ಯಕರ್ತರು ಕಾಂಗ್ರೆಸ್ ಪ್ರಣಾಳಿಕೆ ಸುಟ್ಟು ಪ್ರತಿಭಟನೆ ನಡೆಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net