

ಕಲಬುರಗಿ: ಜಮ್ಮು ಕಾಶ್ಮೀರದ ಪಹಲ್ಗಾಂನಲ್ಲಿ ಉಗ್ರರ ಕೃತ ಖಂಡಿಸಿ ಕಲಬುರಗಿ ನಗರದಲ್ಲಿ ಬಜರಂಗದಳದ ಕಾರ್ಯಕರ್ತರು ಪಾಕಿಸ್ತಾನ ರಾಷ್ಟ್ರದ ಧ್ವಜವನ್ನು ರಸ್ತೆ ಮೇಲೆ ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಜಗತ್ತ್ ವೃತ್ತ, ಸೂಪರ್ ಮಾರ್ಕೆಟ್, ಹಫ್ತ್ ಗುಂಬಜ್ ಪ್ರದೇಶದಲ್ಲಿ ಪಾಕಿಸ್ತಾನ ಧ್ವಜಗಳನ್ನು ರಸ್ತೆ ಮೇಲೆ ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಜಗತ್ ವೃತ್ತದ ಬಳಿ ಮಾತನಾಡಿದ ಕಾರ್ಯಕರ್ತರು ಪಾಕಿಸ್ತಾನಕ್ಕೆ ತಕ್ಕ ಉತ್ತರವನ್ನು ನೀಡಬೇಕಾಗಿದೆ. ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಉಗ್ರರಿಗೆ ಪಾಠ ಕಲಿಸುವವರಿಗೆ ನಮ್ಮ ಹೋರಾಟ ನಿರಂತರವಾಗಿರುತ್ತದೆ ಎಂದು ಎಚ್ಚರಿಕೆ ನೀಡಿದರು.
ಜಗತ್ ವೃತ್ತದ ಬಳಿ ಧ್ವಜಗಳನ್ನು ಅಂಟಿಸುತ್ತಿದ್ದ ಬಜರಂಗದಳದ ಆರು ಕಾರ್ಯಕರ್ತರನ್ನು ಬ್ರಹ್ಮಪುರ ಪೊಲೀಸ್ ಠಾಣೆ ಪೊಲೀಸರು ವಶಕ್ಕೆ ಪಡೆದು ಬಿಡುಗಡೆ ಮಾಡಿದರು.
ಸ್ಥಳಕ್ಕೆ ಆಗಮಿಸಿದ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಅವರು ಅನುಮತಿ ಪಡೆಯದೆ ಪ್ರತಿಭಟನೆ ಮಾಡಲಾಗಿದೆ. ಜಮ್ಮು ಕಾಶ್ಮೀರದ ಪಹಲ್ಗಾಮ್ ಘಟನೆ ಖಂಡಿಸಿ ಪ್ರತಿಭಟನಾತ್ಮಕವಾಗಿ ಧ್ವಜಗಳನ್ನು ರಸ್ತೆಗೆ ಅಂಟಿಸಿ ಅಂಟಿಸಲಾಗಿದೆ. ಈ ಕುರಿತು ಆರು ಜನರನ್ನು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದರು.