ಹರ್ಷನ ಕೊಲೆ, 10ನೇ ಆರೋಪಿಗೆ ಜಾಮೀನು

22 smg Harsha (2)
Published on

ಶಿವಮೊಗ್ಗ: ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಆರೋಪಿ ಜಾಫರ್ ಸಾದಿಕ್‌ಗೆ ಎನ್‌ಐಎ(ರಾಷ್ಟ್ರೀಯ ತನಿಖಾ ದಳ) ವಿಶೇಷ ನ್ಯಾಯಾಲಯ ಬುಧವಾರ ಷರತ್ತುಬದ್ಧ ಜಾಮೀನು ನೀಡಿದೆ.

ಫೆ.20ರಂದು ರಾತ್ರಿ ಭಾರತಿ ಕಾಲನಿಯಲ್ಲಿ ನಡೆದಿದ್ದ ಹರ್ಷನ ಕೊಲೆ ಪ್ರಕರಣದಲ್ಲಿ ಸಾದಿಕ್ 10ನೇ ಆರೋಪಿಯಾಗಿದ್ದ. ಸೆಕೆಂಡ್ ಹ್ಯಾಂಡ್ ಕಾರ್ ಡೀಲರ್ ಆಗಿದ್ದ ಈತನನ್ನು ಪೊಲೀಸರು ಫೆಬ್ರವರಿ 24ರಂದು ಬಂಧಿಸಿದ್ದರು. ಹರ್ಷ ಕೊಲೆ ಪ್ರಕರಣದ ಆರೋಪಿ ಜಿಲಾನ್‌ಗೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಬೆಂಗಳೂರಿನ ಸ್ನೇಹಿತನ ಮನೆಯಲ್ಲಿ ಆಶ್ರಯ ಕೊಡಿಸಿದ್ದ. ಖರೀದಿಸಿದ್ದ ಕಾರುಗಳನ್ನು ಇತರ ಆರೋಪಿಗಳು ಅಪರಾಧವೆಸಗಲು ಮತ್ತು ತಪ್ಪಿಸಿಕೊಳ್ಳಲು ಬಳಕೆ ಮಾಡಿದ್ದರು ಎಂಬ ಆರೋಪ ಸಾದಿಕ್ ಮೇಲಿತ್ತು.

ಅರ್ಜಿ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯವು ಆರೋಪಿಯು 50 ಸಾವಿರ ರೂ. ವೈಯಕ್ತಿಕ ಬಾಂಡ್ ಮತ್ತು ಶ್ಯೂರಿಟಿ ನೀಡಬೇಕು. ನ್ಯಾಯಾಲಯ ವಿನಾಯಿತಿ ನೀಡದ ಹೊರತು ಪ್ರತಿ ಬಾರಿ ಪ್ರಕರಣದ ವಿಚಾರಣೆಗೆ ತಪ್ಪದೆ ಹಾಜರಾಗಬೇಕು. ಪ್ರಕರಣದ ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು ಮತ್ತು ಸಾಕ್ಷೃನಾಶ ಮಾಡಬಾರದು. ಯಾವುದೇ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net