

ಹೂವಿನಹಡಗಲಿ: ತಾಲೂಕಿನ ಪುರ ಗ್ರಾಮದ ಬಳಿ ತುಂಗಭದ್ರಾ ನದಿಯಲ್ಲಿ ಗುರುವಾರ ಪಟ್ಟಣದ ಬೇಕರಿಯೊಂದರ ಮಾಲೀಕ ಶವವಾಗಿ ಪತ್ತೆಯಾಗಿದ್ದಾನೆ. ನವಲಿ ಗ್ರಾಮದ ವೀರೇಶ್(32) ಮೃತ. ನಾಲ್ಕು ದಿನಗಳ ಹಿಂದೆ ಪಟ್ಟಣದ ಬೇಕರಿಯಿಂದ ಸ್ವಗ್ರಾಮಕ್ಕೆ ತೆರಳುವುದಾಗಿ ತಿಳಿಸಿ ಹೋಗಿದ್ದಾರೆ. ಆದರೆ, ಮರಳಿ ಬಾರದ ಕಾರಣ ಕುಟುಂಬಸ್ಥರು ಹುಡುಕಾಡಿದ್ದಾರೆ. ಆದರೆ, ಗುರುವಾರ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪಟ್ಟಣದ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೃತರಿಗೆ ತಂದೆ, ತಾಯಿ, ಪತ್ನಿ, ಪುತ್ರ, ಪುತ್ರಿ ಇದ್ದಾರೆ.