

ಮಂಗಳೂರು: ನಿವೃತ್ತ ಉಪಪ್ರಾಂಶುಪಾಲೆ ಅಮಿತಾ ಎಸ್.ಕಂಗಲ್ ದೇವನ್ ಅವರು ‘ಬಾಕುಡರ ಸಾಂಸ್ಕೃತಿಕ ಅಧ್ಯಯನ’ ವಿಷಯದಲ್ಲಿ ಮಂಗಳೂರು ವಿ.ವಿ ಕನ್ನಡ ವಿಭಾಗದ ಮುಖ್ಯಸ್ಥ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳುಪೀಠ ಹಾಗೂ ತುಳು ಸ್ನಾತಕೋತ್ತರ ಅಧ್ಯಯನ ವಿಭಾಗದ ಸಂಯೋಜಕ ಡಾ.ಮಾಧವ ಎಂ.ಕೆ ಅವರ ಮಾರ್ಗದರ್ಶನದಲ್ಲಿ ಸಿದ್ಧಪಡಿಸಿದ ಮಹಾಪ್ರಬಂಧಕ್ಕೆ ಮಂಗಳೂರು ವಿವಿ ಪಿಎಚ್‌ಡಿ (ಡಾಕ್ಟರೇಟ್) ಪದವಿ ನೀಡಿದೆ.
ಡಾ.ಅಮಿತಾ ಎಸ್. ಅವರು ದಿ.ಮಾಧವ ಮತ್ತು ಸಾವಿತ್ರಿ ಮಂಜೇಶ್ವರ ಅವರ ಪುತ್ರಿಯಾಗಿದ್ದು, ಮಂಜೇಶ್ವರದ ಡಬ್ಲುೃಎಲ್‌ಪಿ ಸ್ಕೂಲ್‌ನಲ್ಲಿ ಪ್ರಾಥಮಿಕ, ಎಸ್‌ಎಟಿಯಲ್ಲಿ ಪ್ರೌಢಶಿಕ್ಷಣ, ಮಂಗಳೂರಿನ ಸರ್ಕಾರಿ ಕಾಲೇಜಿನಲ್ಲಿ ಪದವಿ ಶಿಕ್ಷಣ ಹಾಗೂ ಮಂಗಳೂರು ವಿವಿಯಲ್ಲಿ ಎಂಎ ಪದವಿ ಪೂರೈಸಿ ಮಂಜೇಶ್ವರ ಗೋವಿಂದ ಪೈ ಕಾಲೇಜಿನಲ್ಲಿ ಅಸೋಸಿಯೇಟ್ ಪ್ರೊಫೆಸರ್ ಆಗಿ ಹಾಗೂ ಕನ್ನಡ ವಿಭಾಗದ ಮುಖ್ಯಸ್ಥರಾಗಿ, ಪ್ರಭಾರ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ನಿವೃತ್ತರಾಗ್ದಿರೆ.