ನಾಳೆಯಿಂದ ಬಾಲಗಂಗಾಧರನಾಥ ಸ್ವಾಮೀಜಿ ಜಯಂತ್ಯುತ್ಸವ

Published on

ನಾಗಮಂಗಲ: ತಾಲೂಕಿನ ಆದಿಚುಂಚನಗಿರಿ ಕ್ಷೇತ್ರದಲ್ಲಿ ಜ.12ರಿಂದ ಜ.18 ರವರೆಗೆ 7 ದಿನಗಳ ಕಾಲ ಭೈರವೈಕ್ಯ ಡಾ.ಬಾಲಗಂಗಾಧರನಾಥ ಸ್ವಾಮೀಜಿ ಅವರ 80ನೇ ಜಯಂತ್ಯುತ್ಸವ ಹಾಗೂ 12ನೇ ವರ್ಷದ ಸಂಸ್ಮರಣಾ ಮಹೋತ್ಸವ ನಡೆಯಲಿದೆ.

ಜಯಂತ್ಯುತ್ಸವ ಅಂಗವಾಗಿ ಜ.12 ಮತ್ತು ಜ.13ರಂದು ಕ್ಷೇತ್ರದಲ್ಲಿ ಹೋಮ, ಹವನಾದಿ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದ್ದು, ಜ.14ರಂದು ಬೆಳಗ್ಗೆ 10 ಗಂಟೆಗೆ ಬಿಜಿಎಸ್ ಸಭಾಭವನದಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಗಮ ಕಾರ್ಯಕ್ರಮ ನಡೆಯಲಿದೆ. ಜ.15ರ ಬೆಳಗ್ಗೆ 10 ಗಂಟೆಗೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಕಾರ್ಯಾಗಾರ ನಡೆಯಲಿದೆ. ಜ.16 ರಂದು ಬಿಜಿಎಸ್ ಸಭಾಮಂಟಪದಲ್ಲಿ ರಾಜ್ಯಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಜ.17ರ ಬೆಳಗ್ಗೆ 10 ಗಂಟೆಗೆ ಚುಂಚಾದ್ರಿ ಮಾತೃ ಸಂಗಮ ನಡೆಯಲಿದೆ. ಜ.18ರಂದು ಜಯಂತ್ಯುತ್ಸವ ಹಾಗೂ ಸಂತ-ಭಕ್ತ ಸಂಗಮ ನಡೆಯಲಿದೆ. ಈ ಎಲ್ಲ ಕಾರ್ಯಕ್ರಮಗಳಿಗೂ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಆದಿಚುಂಚನಗಿರಿಯ ವಿವಿಧ ಶಾಖಾಮಠಗಳ ಸ್ವಾಮೀಜಿಗಳು ಪಾಲ್ಗೊಳ್ಳಲಿದ್ದಾರೆಂದು ಆದಿಚುಂಚನಗಿರಿ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net