ಪ್ರತಿಭೆ ಅನಾವರಣಕ್ಕೆ ಬಾಲಮೇಳ ಸೂಕ್ತ ವೇದಿಕೆ

dhp 12-2
ಕೊರವಾರದ ಎಂಪಿಎಸ್, ಕೆಜಿಎಸ್ ಪ್ರಾಥಮಿಕ ಶಾಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಂದಗಿ ಹಾಗೂ ಅಜೀಂ ಪ್ರೇಮ್‌ಜಿ ೌಂಡೇಷನ್ ಸಹಯೋಗದಲ್ಲಿ ನಡೆದ ಬಾಲಮೇಳ ಕಾರ್ಯಕ್ರಮವನ್ನು ಉಪನಿರ್ದೇಶಕ ಕೆ.ಕೆ. ಚವ್ಹಾಣ್ ಉದ್ಘಾಟಿಸಿದರು. ಸಿಡಿಪಿಒ ಎಸ್.ಎನ್. ಹಿರೇಮಠ ಇತರರಿದ್ದರು.
Published on

ದೇವರಹಿಪ್ಪರಗಿ: ಅಂಗನವಾಡಿ ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಅನಾವರಣಗೊಳಿಸಲು ಬಾಲಮೇಳ ಉತ್ತಮ ವೇದಿಕೆ ಆಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಕೆ.ಕೆ. ಚವ್ಹಾಣ ಹೇಳಿದರು.

ತಾಲೂಕಿನ ಕೋರವಾರ ಗ್ರಾಮದ ಎಂಪಿಎಸ್, ಕೆಜಿಎಸ್ ಪ್ರಾಥಮಿಕ ಶಾಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಂದಗಿ ಹಾಗೂ ಅಜೀಂ ಪ್ರೇಮ್‌ಜಿ ೌಂಡೇಷನ್ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಬಾಲಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಬಾಲಮೇಳ ಸಹಕಾರಿಯಾಗಿದೆ.

ಸಿಡಿಪಿಒ ಎಸ್.ಎನ್. ಹಿರೇಮಠ ಮಾತನಾಡಿ, ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಬೌದ್ಧಿಕ, ಶಾರೀರಕ, ಮಾನಸಿಕ, ಕ್ರಿಯಾತ್ಮಕ ಚಟುವಟಿಕೆ ಸೇರಿ ನೈತಿಕ ಮೌಲ್ಯಗಳ ಕುರಿತು ತಿಳಿಸಿಕೊಡಲಾಗುವುದು ಎಂದರು.

ಗ್ರಾಮದ ಎ್ಲ ಅಂಗನವಾಡಿ ಮಕ್ಕಳು ಚಿತ್ರಕಲೆ, ಕಿರುನಾಟಕ, ಸಂಗೀತ, ನೃತ್ಯ, ವೇಷಭೂಷಣ ಸೇರಿ ವಿವಿಧ ಕ್ರಿಯಾತ್ಮಕ ಚಟುವಟಿಕೆಯಲ್ಲಿ ಉತ್ಸುಕತೆಯಿಂದ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net