

ಮಂಡ್ಯ: ಜಿಲ್ಲಾ ಒಕ್ಕಲಿಗರ ಸೇವಾ ಟ್ರಸ್ಟ್, ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ಜಿಲ್ಲಾ ಘಟಕದ ಸಹಯೋಗದಲ್ಲಿ ಫೆ.21ರಂದು ಪದ್ಮಭೂಷಣ ಡಾ.ಬಾಲಗಂಗಾಧರನಾಥ ಸ್ವಾಮೀಜಿ ಅವರ 79ನೇ ಜಯಂತ್ಯುತ್ಸವ, ಪಟ್ಟಾಭಿಷೇಕ ಸುವರ್ಣ ಮಹೋತ್ಸವ ಹಾಗೂ ಚುಂಚಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಪಟ್ಟಾಭಿಷೇಕ ದಶಮಾನೋತ್ಸವ ಮತ್ತು ಪದ್ಮಶ್ರೀ ಡಾ.ಸಿ.ಎನ್.ಮಂಜುನಾಥ್ ಅವರಿಗೆ ಸನ್ಮಾನ ಸಮಾರಂಭ ಹಾಗೂ ಸಂಕ್ರಾಂತಿ ಸುಗ್ಗಿ ಸಂಭ್ರಮ ಆಯೋಜಿಸಲಾಗಿದೆ ಎಂದು ಒಕ್ಕಲಿಗರ ಸಂಘದ ಗೌರವಾಧ್ಯಕ್ಷ ಸಿ.ತಮ್ಮಯ್ಯ ಚಿಕ್ಕೋನಹಳ್ಳಿ ತಿಳಿಸಿದರು.
ಅಂದು ಬೆಳಿಗ್ಗೆ 11ಗಂಟೆಗೆ ನಗರದ ರೈತ ಸಭಾಂಗಣದ ಆವರಣದಲ್ಲಿ ಆಯೋಜಿಸಿರುವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟಿಸಲಿದ್ದು, ಶಾಸಕ ರವಿಕುಮಾರ್ ಗಣಿಗ ಅಧ್ಯಕ್ಷತೆ ವಹಿಸಲಿದ್ದಾರೆ. ಕೊಮ್ಮೇರಹಳ್ಳಿ ವಿಶ್ವಮಾನವ ಶಾಖಾ ಮಠದ ಮುಖ್ಯಸ್ಥ ಪುರುಷೋತ್ತಮಾನಂದನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಶಾಸಕರಾದ ಎ.ಬಿ.ರಮೇಶ ಬಂಡಿಸಿದ್ದೇಗೌಡ, ಪಿ.ಎಂ.ನರೇಂದ್ರಸ್ವಾಮಿ, ಕೆ.ಎಂ.ಉದಯ್, ದರ್ಶನ್ ಪುಟ್ಟಣ್ಣಯ್ಯ, ಎಚ್.ಟಿ. ಮಂಜು, ಎಂಎಲ್‌ಸಿಗಳಾದ ಮರಿತಿಬ್ಬೇಗೌಡ, ಮಧು ಜಿ.ಮಾದೇಗೌಡ, ದಿನೇಶ್ ಗೂಳಿಗೌಡ, ಸಂಸದೆ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಡಿ.ಹನುಮಂತಯ್ಯ, ಒಕ್ಕಲಿಗರ ಸಂಘದ ರಾಜ್ಯಾಧ್ಯಕ್ಷ ಸಿ.ಜೆ.ಗಂಗಾಧರಗೌಡ, ಪ್ರಧಾನ ಕಾರ್ಯದರ್ಶಿ ರಂಗೇಗೌಡ, ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಡಾ.ಶಾಂತಾ ಸುರೇಂದ್ರ ಭಾಗವಹಿಸಲಿದ್ದಾರೆ ಎಂದರು.
ವಿಶೇಷ ಆಹ್ವಾನಿತರಾಗಿ ಮಂಡ್ಯ ಜಿಲ್ಲಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಭವನೀಯ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು), ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾದ ಅಶೋಕ್ ಜಯರಾಂ, ಮೂಡ್ಯ ಚಂದ್ರು, ರಾಘವೇಂದ್ರ ಬಸರಾಳು, ನೆಲ್ಲಿಗೆರೆ ಬಾಲು, ಕೆ.ಬಸವರಾಜೇಗೌಡ, ಒಕ್ಕಲಿಗರ ಸೇವಾ ಟ್ರಸ್ಟ್ ಅಧ್ಯಕ್ಷ ಕೆ.ಎಸ್.ಬಸವೇಗೌಡ, ಪ್ರಧಾನ ಕಾರ್ಯದರ್ಶಿ ಡಾ.ಟಿ.ಟಿ.ಅನುಸೂಯ ಇತರರು ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.
ಸಂಘದ ರಾಜ್ಯ ಉಪಾಧ್ಯಕ್ಷ ಎಲ್.ಕೃಷ್ಣ, ರಾಜ್ಯ ಸಂಚಾಲಕ ಬಿ.ಆರ್. ಕೃಷ್ಣೇಗೌಡ, ಜಿಲ್ಲಾಧ್ಯಕ್ಷ ಕೆ.ಸಿ.ರವೀಂದ್ರ, ಮಹಿಳಾ ಘಟಕದ ಜಿಲ್ಲಾಧ್ಯಕ್ಷ ಸಿ.ಜೆ.ಸುಜಾತಾ ಕೃಷ್ಣ, ಒಕ್ಕಲಿಗರ ಸೇವಾ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಡಾ.ಟಿ.ಟಿ.ಅನುಸೂಯ ಹಾಜರಿದ್ದರು.