ಬಲಮುರಿಯಲ್ಲಿ ಜಾತ್ರಾ ಮಹೋತ್ಸವ ಸಂಪನ್ನ

16.NPK ..1
Published on

ನಾಪೋಕ್ಲು: ಸಮೀಪದ ಹೊದ್ದೂರು ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ಧ ಬಲಮುರಿಯ ಶ್ರೀ ಆಗಸ್ತೇಶ್ವರ ದೇವಾಲಯದಲ್ಲಿ ಶನಿವಾರ ಕಾವೇರಿ ನದಿಗೆ ಮಹಾ ಮಂಗಳಾರತಿಯೊಂದಿಗೆ ತೀರ್ಥ ಸ್ಥಾನ, ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಸಂಪನ್ನಗೊಂಡಿತ್ತು.

ಭಕ್ತಾದಿಗಳು ಕಾವೇರಿ ಸಂಕ್ರಮಣದ ಪುಣ್ಯ ಸ್ಥಾನ ಮಾಡುವುದು ತಲೆತಲಾಂತರಗಳಿಂದ ನಡೆದು ಬಂದ ಪದ್ಧತಿಯಾಗಿದೆ. ವಿಶೇಷ ಪೂಜೆ ಸಲ್ಲಿಸಿ ಇಷ್ಟಾರ್ಥ ಸಿದ್ಧಿಗೆ ದೇವರಲ್ಲಿ ಪ್ರಾರ್ಥಿಸಿದರು.

ಕ್ಷೇತ್ರದಲ್ಲಿ ಬೆಳಗ್ಗೆಯಿಂದಲೇ ಕೇಶ ಮುಂಡನ, ಪಿಂಡಪ್ರಧಾನ, ಕಾವೇರಿ ತೀರ್ಥಸ್ನಾನ, ಕಾವೇರಿಯ ಬಾಲೋಪಾಟ್ ಮತ್ತಿತರ ಕಾರ್ಯಗಳು ಜರುಗಿದವು. 11.30 ಗಂಟೆಗೆ ಕಾವೇರಿಗೆ ಮಹಾ ಮಂಗಳಾರತಿಯನ್ನು ಅರ್ಚಕ ಮಹಾಬಲೇಶ್ವರ ಭಟ್ ಸಹವರ್ತಿಗಳು ನೆರವೇರಿಸಿದರು. ಬಳಿಕ ನದಿಯಿಂದ ಪವಿತ್ರ ನೀರನ್ನು ಅರ್ಚಕರು ಬಿಂದಿಗೆಯಲ್ಲಿ ದೇವಾಲಯಕ್ಕೆ ಕೊಂಡೊಯ್ದು ಅಭಿಷೇಕ ಮಾಡಿದರು. ನಂತರ ಮಹಾಪೂಜೆ, ಮಂಗಳಾರತಿ ತೀರ್ಥ ಪ್ರಸಾದ, ಭಕ್ತರಿಗೆ ಅನ್ನ ಸಂತರ್ಪಣೆ ನೆರವೇರಿತು.

ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಕಸಾಪ, ಮಹಾದೇವ ಸ್ಪೋರ್ಟ್ಸ್ ಕ್ಲಬ್ ಬಲಮುರಿ ಇವರ ಸಹಯೋಗದಲ್ಲಿ ಸ್ಥಳೀಯ ಕಲಾವಿದರಿಂದ ಭಕ್ತಿ ಗೀತೆ ಕಾರ್ಯಕ್ರಮ ನಡೆಯಿತು. ಉತ್ಸವದಲ್ಲಿ ದೇವಾಲಯದ ಆಡಳಿತ ಮಂಡಳಿ ನಿರ್ದೇಶಕರು, ಅನ್ನದಾನ ಸಮಿತಿ ಅಧ್ಯಕ್ಷ ಬೊಳ್ಳಚೆಟ್ಟಿರ ವಿಜಯ್ ಚೆಟ್ಟಿಚ್ಚ, ಉಪಾಧ್ಯಕ್ಷ ಪಾಲಂದಿರಚಂಗಪ್ಪ, ಬಲಮುರಿ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ತೊತ್ತಿಯಂಡ ಬನ್ಸಿ ಚಿಣ್ಣಪ್ಪ, ಕಾರ್ಯದರ್ಶಿ ಬೊಳ್ಳಚೆಟ್ಟಿರ ಜಯಂತಿ, ಕಾಫಿ ಮಂಡಳಿ ಮಾಜಿ ಸದಸ್ಯೆ ತಾರಾ ಅಯ್ಯಮ್ಮ, ತಾಪಂ ಮಾಜಿ ಉಪಾಧ್ಯಕ್ಷೆ ಬಿದ್ದಂಡು ಉಷಾ ದೇವಮ್ಮ, ಮಾಜಿ ಸದಸ್ಯ ಬೊಳ್ಳಚೆಟ್ಟಿರ ಸುರೇಶ್ ಇತರು ಭಾಗವಹಿಸಿದ್ದರು.

ಕಾವೇರಿ ಎಡದಂಡೆಯ ಕಣ್ವ ಮುನೇಶ್ವರ ದೇವಾಲಯದಲ್ಲೂ ವಿಜೃಂಭಣೆಯಿಂದ ಉತ್ಸವ ಆಚರಿಸಲಾಯಿತು. ಮಧ್ಯಾಹ್ನ ದೇವಾಲಯದಲ್ಲಿ ಮಹಾಪೂಜೆ ನೆರವೇರಿತು. ಇದಕ್ಕೂ ಮುನ್ನ ಅರ್ಚಕರು ಸಾಮೂಹಿಕ ಸತ್ಯನಾರಾಯಣ ಪೂಜೆ ನೆರವೇರಿಸಿದರು. ಅರ್ಚಕ ರವಿ ಕಲ್ಲುರಾಯ ಪೂಜೆ ನೆರವೇರಿಸಿದರು. ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ನೆರವಂಡ ಉತ್ತಪ್ಪ, ಕಾರ್ಯದರ್ಶಿ ಚೇಯಂಡ ತಿಮ್ಮಯ್ಯ. ಮೂರ್ನಾಡು ಕೊಡವ ಸಮಾಜದ ಕಾರ್ಯದರ್ಶಿ ಸೂರಜ್ ತಮ್ಮಯ್ಯ, ನೆರವಂಡ ಕ್ಯಾಪ್ಟನ್ ಸುಭಾಷ್ ುತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net