

ಮಂಡ್ಯ: ನಗರದ ರೈಲು ನಿಲ್ದಾಣದ ಮುಂಭಾಗದಲ್ಲಿರುವ ಬಾಲಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದಲ್ಲಿ ಬುಧವಾರ ಪೂಜಾ ಮಹೋತ್ಸವ ಸಂಭ್ರಮ ಸಡಗರದಿಂದ ನಡೆಯಿತು.
ಮಂಗಳವಾರದಿಂದಲೇ ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯ ನಡೆದವು. ಬುಧವಾರ ಮುಂಜಾನೆ 6.30ರಿಂದ 10 ಗಂಟೆಯವರೆಗೆ ಬಾಲಸುಬ್ರಹ್ಮಣ್ಯ ಸ್ವಾಮಿ ಸನ್ನಿಧಿಯಲ್ಲಿ ಸ್ಕಂದ ಹೋಮ ಕಲಶಾಭಿಷೇಕ, ಫಲಪಂಚಾಮೃತ ಅಭಿಷೇಕ ನಡೆಯಿತು. ಬಳಿಕ ಮಹಾಮಂಗಳಾರತಿ, ಹಾಗೂ ಪ್ರಸಾದ ವಿನಿಯೋಗ ಏರ್ಪಡಿಸಲಾಗಿತ್ತು. ನಂತರ ಬೆಳಗ್ಗಿನಿಂದ ರಾತ್ರಿ 10 ಗಂಟೆವರೆಗೆ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು. ಪೂಜಾ ಮಹೋತ್ಸವದ ಅಂಗವಾಗಿ ದೇವಾಲಯವನ್ನು ತಳಿರು ತೋರಣ ಮತ್ತು ವಿಧ ವಿಧದ ಪುಷ್ಪಗಳಿಂದ ಅಲಂಕರಿಸಲಾಗಿತ್ತು. ದೇವಾಲಯದ ಸುತ್ತಮುತ್ತ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು.
ಶಂಕರ್, ರಘು, ಕಣಿವೇಲು, ನಾರಾಯಣ್, ರಾಜು, ಗೋಪಾಲ್, ಕುಪ್ಪಣ್ಣ, ಸತ್ಯ, ಷಣ್ಮುಗಂ, ಮಂಜು, ಚೆಲುವ, ಏಳುಮಲೈ, ಲತಾಶಂಕರ್ ಸೇರಿದಂತೆ ಹಲವರು ಪೂಜಾ ಕಾರ್ಯದಲ್ಲಿ ಭಾಗವಹಿಸಿದ್ದರು.