

ವಿಜಯವಾಣಿ ಸುದ್ದಿಜಾಲ ಚನ್ನರಾಯಪಟ್ಟಣ
ಹೋಬಳಿಯ ಬಾಲೇಪುರ ಡೇರಿ ಅಧ್ಯಕ್ಷರಾಗಿ ಕೆಂಪಣ್ಣ ಹಾಗೂ ಉಪಾಧ್ಯಕ್ಷೆಯಾಗಿ ನಾಗವೇಣಿ ಈರಣ್ಣ ಆಯ್ಕೆಯಾದರು.
ಹೋಬಳಿಯ ಬಾಲೇಪುರ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ನಿಗದಿಯಾಗಿದ್ದ ಚುನಾವಣಾ ಪ್ರಕ್ರಿಯೆಯಲ್ಲಿ ಇಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆ ಎಂದು ಚುನಾವಣಾಧಿಕಾರಿ ಶಿವಕುಮಾರ್ ೋಷಿಸಿದರು.
ಅಧ್ಯಕ್ಷ ಕೆಂಪಣ್ಣ ಮಾತನಾಡಿ, ಸಂಘದ ಅಭಿವೃದ್ಧಿಗೆ ಶ್ರಮಿಸುವ ಜತೆಗೆ ಬಮುಲ್‌ನಿಂದ ಲಭ್ಯವಿರುವ ಎಲ್ಲ ಸೌಲಭ್ಯಗಳನ್ನು ರೈತರಿಗೆ ದೊರಕಿಸಿಕೊಡಲಾಗುವುದು ಎಂದರು.
ಜಿಪಂ ಮಾಜಿ ಅಧ್ಯಕ್ಷ ಲಕ್ಷ್ಮೀನಾರಾಯಣ್ ಮಾತನಾಡಿ, ಸಹಕಾರ ಸಂಘದಲ್ಲಿ ಯಾವುದೇ ರಾಜಕೀಯ ಮಾಡದೆ ರೈತರಿಗೂ ಲಾಭ ಕಲ್ಪಿಸುವ ಜತೆಗೆ ಸಂಘದ ಅಭಿವೃದ್ಧಿಗೆ ಆದ್ಯತೆ ನೀಡಬೇಕು. ರೈತರು ಗುಣಮಟ್ಟದ ಹಾಲು ಸರಬರಾಜು ಮಾಡಲು ಕಾಳಜಿವಹಿಸಬೇಕು ಎಂದರು.
ಸಂಘದಲ್ಲಿ ದುಂದು ವೆಚ್ಚಕ್ಕೆ ಆಸ್ಪದ ನೀಡಬಾರದು. ಎಲ್ಲರೂ ಒಗ್ಗಟ್ಟಿನಿಂದ ಸಂಘದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು. ರೈತರಿಗೆ ಬೋನಸ್ ನೀಡುವ ಜತೆಗೆ ಅಗತ್ಯ ಸೌಲಭ್ಯ ಕಲ್ಪಿಸಿಕೊಡಬೇಕು ಎಂದರು.
ಮುಂಖಡರಾದ ರಾಮಕೃಷ್ಣಪ್ಪ, ರಾಮಾಂಜಿನಪ್ಪ, ನಾಗರಾಜು, ಉಮೇಶ್ ಮತ್ತಿತರರು ಇದ್ದರು.