ಶಿಕ್ಷಣಕ್ಕೆ ಬಾಲಗಂಗಾಧರ ಸ್ವಾಮೀಜಿಗಳ ಕೊಡುಗೆ ಅಪಾರ

25sri-1 (1)
Published on

ಶೃಂಗೇರಿ: ಆದಿಚುಂಚನಗಿರಿ ಶ್ರೀ ಬಾಲಗಂಗಾಧರ ಸ್ವಾಮೀಜಿ ಅವರು ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳಿಗೆ ನೀಡಿದ ಕೊಡುಗೆ ಅನನ್ಯ. ಶಿಕ್ಷಣ ಕ್ಷೇತ್ರದಲ್ಲಿ ಅವರು ಮಾಡಿದ ಸಾಧನೆ ಜನಮಾನಸದಲ್ಲಿ ಶಾಶ್ವತವಾಗಿ ಉಳಿಯುತ್ತದೆ ಎಂದು ಬಿಜಿಎಸ್ ಕಾಲೇಜಿನ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಜಿತ್ ಗೌಡ ಹೇಳಿದರು.

ಆದಿಚುಂಚನಗಿರಿ ಶಾಖಾಮಠ ಮತ್ತು ಹಳೇ ವಿದ್ಯಾರ್ಥಿ ಸಂಘ ಬಿಜಿಎಸ್ ಸಭಾಂಗಣದಲ್ಲಿ ಆಯೋಜಿಸಿದ ಬಾಲಗಂಗಾಧರನಾಥ ಸ್ವಾಮೀಜಿ 80ನೇ ಜಯಂತ್ಯುತ್ಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಧ್ಯಾತ್ಮ ಮಾರ್ಗವನ್ನು ಆಯ್ಕೆ ಮಾಡಿಕೊಂಡು ಆದಿಚುಂಚನಗಿರಿ ಮಹಾಸಂಸ್ಥಾನದ 70ನೇ ಗುರುಗಳಾಗಿ ಮಠವನ್ನು ಉನ್ನತ ಸ್ಥಾನಕ್ಕೆ ಏರಿಸಿದರು. ಆಧ್ಯಾತ್ಮಕ್ಕೆ ಹೆಚ್ಚಿನ ಒತ್ತು ನೀಡಿ ಮಠದ ಶಿಷ್ಯರು ಅದೇ ಹಾದಿಯಲ್ಲಿ ನಡೆಯುವಂತೆ ಮಾರ್ಗದರ್ಶನ ನೀಡಿದರು. 40ಕ್ಕೂ ಹೆಚ್ಚು ಶಾಖಾ ಮಠಗಳು 650ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳು ರಾಜ್ಯ,ದೇಶ, ವಿದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು ಅವರ ದೂರದೃಷ್ಠಿಗೆ ಹಿಡಿದ ಕೈಗನ್ನಡಿ ಎಂದರು.

ಮಠದ ಮೇಲ್ವಿಚಾರಕ ಹೆಚ್.ಎಲ್ ಹರೀಶ್ ಮಾತನಾಡಿ, ಜಾತಿ, ಮತ, ಭೇದವಿಲ್ಲದೆ ಎಲ್ಲರಲ್ಲಿ ಶಿಕ್ಷಣ, ಆರೋಗ್ಯ, ಪರಿಸರದ ಕುರಿತು ಕಾಳಜಿ ವಹಿಸಿ ನುಡಿದಂತೆ ನಡೆದ ಗುರುಗಳ ಸಾಧನೆ ಸರ್ವರಿಗೂ ಆದರ್ಶ. ಇಂತಹ ಗುರುವಿನ ಜಯಂತ್ಯುತ್ಸವ ಆಚರಿಸುವ ಭಾಗ್ಯ ನಮಗೆ ದೊರೆತಿದ್ದು ನಮ್ಮೆಲ್ಲರ ಪುಣ್ಯ ಎಂದರು.

ಸಬ್ ಇನ್‌ಸ್ಪೆಕ್ಟರ್ ನಿಂಗಪ್ಪ ಜಕ್ಕಣ್ಣವರ್, ವೈದ್ಯ ಡಾ.ಅಣ್ಣಾದೊರೆ, ಬಿಜಿಎಸ್ ಕಾಲೇಜಿನ ವಿಜ್ಞಾನ ವಿಭಾಗದ ಡೀನ್ ಸಂಜಯ್ ಮಿರ್ಜಿ, ಶೃಂಗೇರಿ ಬಿಜಿಎಸ್ ಕಾಲೇಜಿನ ಪ್ರಾಚಾರ್ಯ ಕೆ.ಸಿ.ನಾಗೇಶ್, ಬಿಜಿಎಸ್ ಕಾಲೇಜಿನ ಪ್ರಾಚಾರ್ಯರಾದ ವೈ.ಎ.ಸುರೇಶ್, ಮುಸ್ತಾಕ್ ಅಹಮ್ಮದ್, ಪ್ರೌಢಶಾಲೆ ಮುಖ್ಯಶಿಕ್ಷಕ ಮಹಾಬಲೇಶ್, ಕಿರಣ್ ಕುಮಾರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net