ಮಾತೋಶ್ರೀ ಶಂಕರಮ್ಮ ಪ. ಬಳಿಗಾರ್ ದತ್ತಿ ಪ್ರಶಸ್ತಿ

Manu Baligar
Published on

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಡಾ. ಮನು ಬಳಿಗಾರ್ ಹಾಗೂ ಅವರ ಸಹೋದರ ಎಸ್.ಪಿ. ಬಳಿಗಾರ್ ಅವರು ಕರ್ನಾಟಕ ಲೇಖಕಿಯರ ಸಂಘದಲ್ಲಿ ‘ಮಾತೋಶ್ರೀ ಶಂಕರಮ್ಮ ಪ. ಬಳಿಗಾರ್ ದತ್ತಿ ಪ್ರಶಸ್ತಿ’ ಸ್ಥಾಪಿಸಿದ್ದಾರೆ.

ಈ ದತ್ತಿಯಿಂದ ಪ್ರತಿ ವರ್ಷ ಮೂರು ಪ್ರಶಸ್ತಿಗಳನ್ನು ನೀಡಲು ಅವರು ನಿರ್ಧರಿಸಿದ್ದಾರೆ. ಈ ಸಂಬಂಧ 5,00,200 ದತ್ತಿ ಮೊತ್ತ ಇರಿಸಿದ್ದಾರೆ. ಗದ್ಯ ಸಾಹಿತ್ಯ, ಕಾವ್ಯ ಪ್ರಕಾರ ಹಾಗೂ ಸಮಾಜ ಸೇವೆ ಕ್ಷೇತ್ರದಲ್ಲಿ ಪ್ರಶಸ್ತಿ ಸ್ಥಾಪಿಸಲು ನಿರ್ಧರಿಸಲಾಗಿದೆ.

50 ವರ್ಷ ಮೇಲ್ಪಟ್ಟ ಸಾಧಕರನ್ನು ಪ್ರಶಸ್ತಿಗೆ ಪರಿಗಣಿಸಲಾಗುತ್ತದೆ. ಪ್ರಶಸ್ತಿಯು ತಲಾ 10 ಸಾವಿರ ನಗದು ಒಳಗೊಂಡಿರಲಿದೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net