ಯಕ್ಷಗಾನಕಲೆಗೆ ಮಾಹೆ ಪ್ರೋತ್ಸಾಹ: ಡಾ.ಎಚ್​.ಎಸ್​.ಬಲ್ಲಾಳ್​

udp-1-yaksha
Published on


ಉಡುಪಿ: ಯಕ್ಷಗಾನ ಕೇಂದ್ರದ ಮೂಲಕ ಮಕ್ಕಳಿಗೆ ಯಕ್ಷಗಾನ ಹಾಗೂ ಶಾಲಾ ಶಿಕ್ಷಣವನ್ನು ಉಚಿತವಾಗಿ ನೀಡುವುದರ ಮೂಲಕ ಈ ಕಲೆಯನ್ನು ಯುವ ಜನಾಂಗಕ್ಕೆ ಪರಿಚಯಿಸುವ ಕೆಲಸವನ್ನು ಮಾಡಲಾಗುತ್ತಿದೆ. ಮಾಹೆಯಲ್ಲಿ ವಿದ್ಯಾಭ್ಯಾಸಕ್ಕಾಗಿ ಬರುವ ವಿದೇಶಿ ವಿದ್ಯಾರ್ಥಿಗಳಿಗೆ, ಹಾಗೂ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಡಿಯಲ್ಲಿ ಸ್ಥಳಿಯ ಆಸಕ್ತ ವಿದ್ಯಾರ್ಥಿಗಳಿಗೆ ಯಕ್ಷಗಾನ ಪರಿಚಯಿಸುತ್ತಿದ್ದೇವೆ. ಯಕ್ಷಗಾನ ಕಲೆಯ ಪ್ರೋತ್ಸಾಹವೇ ಮಾಹೆಯ ಗುರಿ ಎಂದು ಮಾಹೆಯ ಸಹಕುಲಾಧಿಪತಿ ಡಾ.ಎಚ್​.ಎಸ್​.ಬಲ್ಲಾಳ್​ ತಿಳಿಸಿದರು.

ಭಾನುವಾರ ಎಂ.ಜಿ.ಎಂ ಕಾಲೇಜಿನಲ್ಲಿ ಯಕ್ಷಗಾನ ಕೇಂದ್ರ ಇಂದ್ರಾಳಿ, ಪ್ರಾದೇಶಿಕ ಜಾನಪದ ರಂಗಕಲೆಗಳ ಅಧ್ಯಯನ ಕೇಂದ್ರ ಹಾಗೂ ಕನ್ನಡ ಮತ್ತು ಸಂಸತಿ ಇಲಾಖೆ ಆಶ್ರಯದಲ್ಲಿ ಯಕ್ಷದಿಗ್ಗಜರಿಂದ ಸಿವೇಷಗಳು ಮತ್ತು ಹಾಸ್ಯ ವೇಷಗಳ ಪ್ರಾತ್ಯಕೆ, ದಾಖಲೀಕರಣ ಉದ್ಘಾಟಿಸಿ ಮಾತನಾಡಿದರು.

ಯಕ್ಷಗಾನ ಕೇಂದ್ರದ ಸಲಹಾ ಸಮಿತಿ ಅಧ್ಯಕ್ಷ ಪಳ್ಳಿ ಕಿಶನ್​ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಸಂಸತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಎಂ.ಜಿ.ಎಂ ಕಾಲೇಜಿನ ಪ್ರಾಂಶುಪಾಲ ಪ್ರೊ. ಲಕ್ಷಿ$್ಮನಾರಾಯಣ ಕಾರಂತ, ಕೆ.ಎಂ.ಸಿ, ಮಣಿಪಾಲ ನೇತ್ರ ತೆ ಡಾ. ಶೈಲಜಾ ಮುಖ್ಯ ಅತಿಥಿಗಳಾಗಿದ್ದರು. ಹಿರಿಯ ಸಿವೇಷಧಾರಿ ಬೇಳಂಜೆ ಜಯಂತ ನಾಯ್ಕ ಉಪಸ್ಥಿತರಿದ್ದರು. ಕೇಂದ್ರದ ಆಡಳಿತಾಧಿಕಾರಿ ಡಾ.ಬಿ.ಜಗದೀಶ್​ ಶೆಟ್ಟಿ ಸ್ವಾಗತಿಸಿ, ಸಲಹಾ ಸಮಿತಿ ಸದಸ್ಯರಾದ ಪ್ರೊ.ಎಸ್​.ವಿ.ಉದಯಕುಮಾರ್​ ಶೆಟ್ಟಿ ಪ್ರಸ್ತಾಪಿಸಿದರು. ರಾವೇಂದ್ರ ತುಂಗ ಕಾರ್ಯಕ್ರಮ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net