ಮೇದರ ಶಾಂತಿ ಬಲ್ಲಮಾವಟಿ ಗ್ರಾ.ಪಂ. ಅಧ್ಯಕ್ಷೆ

10mdk04
Published on

ಮಡಿಕೇರಿ:

ಬಲ್ಲಮಾವಟ್ಟಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಮೇದರ ಶಾಂತಿ ಪೂವಯ್ಯ ಮತ್ತು ಉಪಾಧ್ಯಕ್ಷರಾಗಿ ಚೋಕಿರ ಬಾಬಿ ಭೀಮಯ್ಯ ಅಯ್ಕೆಯಾದರು. ಗುರುವಾರ ನಡೆದ ಚುನಾವಣೆಯಲ್ಲಿ ಈ ಆಯ್ಕೆ ನಡೆಯಿತು.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಅಪ್ಪಚೆಟ್ಟೊಳಂಡ ಮನು ಮುತ್ತಪ್ಪ, ಶಕ್ತಿ ಕೇಂದ್ರದ ಪ್ರಮುಖರಾದ ಚಂಗೆಟ್ಟಿರ ಕುಮಾರ್ ಸೋಮಣ್ಣ, ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ಕರವಂಡ ಲವ ನಾಣಯ್ಯ, ಬಿಜೆಪಿ ಜಿಲ್ಲಾ ಸಾಮಾಜಿಕ ಜಾಲತಾಣಗಳ ಸದಸ್ಯ ಕರವಂಡ ಅಪ್ಪಣ್ಣ, ಬೂತ್ ಅಧ್ಯಕ್ಷ ಚಿಯಂಡಿರ ದಿನೇಶ್ ಹಾಗೂ ಗ್ರಾಮ ಪಂಚಾಯಿತಿಯ ಎಲ್ಲಾ ಸದಸ್ಯರು, ಬಿಜೆಪಿಯ ಮುಖಂಡರು, ಕಾರ್ಯಕರ್ತರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net