ದೆಹಲಿ ರೈತರ ಪ್ರತಿಭಟನೆಗೆ ಬೆಂಬಲಿಸಿ ಧರಣಿ ನಡೆಸಿದ ರೈತ ಸಂರ್ಷ ಸಮಿತಿ

301120 Ballari Farmers Protest to Support Delhi Farmers
ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಎದುರು ದೆಹಲಿಯಲ್ಲಿ ರೈತರ ಹೋರಾಟ ಬೆಂಬಲಿಸಿ ಹಾಗೂ ಸರ್ಕಾರಗಳ ಕೃಷಿ ವಿರೋಧಿ ನೀತಿ ಖಂಡಿಸಿ ಸೋಮವಾರ ರೈತ ಸಂರ್ಷ ಸಮನ್ವಯ ಸಮಿತಿಯಿಂದ ಧರಣಿ ಹಮ್ಮಿಕೊಳ್ಳಲಾಗಿತ್ತು.
Published on

ಬಳ್ಳಾರಿ: ಕಾರ್ಪೊರೇಟ್ ಕಂಪನಿಗಳ ಪರವಾದ ಕೃಷಿ ಕಾಯ್ದೆ ಹಿಂಪಡೆಯುವ ಬದಲಿಗೆ ದೆಹಲಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿರುವ ರೈತರ ಮೇಲೆ ಪೊಲೀಸರ ಮೂಲಕ ದೌರ್ಜನ್ಯ ನಡೆಸಿರುವುದನ್ನು ಖಂಡಿಸಿ ಹಾಗೂ ದೆಹಲಿ ಪ್ರತಿಭಟನೆ ಬೆಂಬಲಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ರೈತ ಸಂರ್ಷ ಸಮನ್ವಯ ಸಮಿತಿಯಿಂದ ಧರಣಿ ಹಮ್ಮಿಕೊಳ್ಳಲಾಗಿತ್ತು.

ದೆಹಲಿಯಲ್ಲಿ ರೈತರ ಮೇಲೆ ನಡೆಸಿರುವ ದೌರ್ಜನ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಕ್ಷಮೆ ಕೇಳಬೇಕು. ಕೃಷಿ, ಕಾರ್ಮಿಕ ಹಾಗೂ ವಿದ್ಯುತ್ ಕಾಯ್ದೆಗಳ ತಿದ್ದುಪಡಿಯನ್ನು ಹಿಂಪಡೆಯಬೇಕು. ಡಾ.ಎಂ.ಎಸ್.ಸ್ವಾಮಿನಾಥನ್ ವರದಿಯಂತೆ ಕೃಷಿ ಉತ್ಪನ್ನ ವೆಚ್ಚಕ್ಕೆ ಶೇ.50 ಲಾಭಾಂಶದೊಂದಿಗೆ ಬೆಂಬಲ ಬೆಲೆ ನಿಗದಿಪಡಿಸಬೇಕು. ರೈತರು, ಕೂಲಿ ಕಾರ್ಮಿಕರಿಗೆ ಬಡ್ಡಿ ರಹಿತ ಸಾಲ ನೀಡಬೇಕು. ಋಣ ಮುಕ್ತ ಕಾಯ್ದೆ ಜಾರಿಗೊಳಿಸಬೇಕು.

ಕೋವಿಡ್ ಸಂಕಷ್ಟ ಹಿನ್ನೆಲೆ ಆದಾಯ ತೆರಿಗೆ ವ್ಯಾಪ್ತಿಗೆ ಬಾರದ ಕುಟುಂಬಗಳಿಗೆ ವಾಸಿಕ ತಲಾ 7,500 ರೂ. ಪರಿಹಾರ ಹಾಗೂ ಪ್ರತಿ ವ್ಯಕ್ತಿಗೆ 10 ಕೇ.ಜಿ ಆಹಾರ ಧಾನ್ಯದ ಕಿಟ್ ನೀಡಬೇಕು. ನಗರ ಪ್ರದೇಶವನ್ನೂ ಒಳಗೊಂಡಂತೆ 200 ದಿನ ಉದ್ಯೋಗ ಖಾತ್ರಿ ಕೆಲಸ ನೀಡುವುದರ ಜತೆಗೆ ಕೂಲಿ ಮೊತ್ತವನ್ನು 700 ರೂ.ಗೆ ಹೆಚ್ಚಿಸಬೇಕೆಂದು ಒತ್ತಾಯಿಸಲಾಯಿತು. ವಿವಿಧ ರೈತ ಹಾಗೂ ಕಾರ್ಮಿಕ ಸಂಟನೆಗಳ ಮುಖಂಡರಾದ ವಿ.ಎಸ್.ಶಿವಶಂಕರ್, ವಾಧವ ರೆಡ್ಡಿ, ಸತ್ಯಬಾಬು, ಗೋವಿಂದ್, ಕೃಷ್ಣ ಸಂಗನಕಲ್ಲು, ಗಂಗಾ ಧಾರವಾಡ್ಕರ್, ಯು.ಬಸವರಾಜ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net