ರೇಷ್ಮೆ, ಹತ್ತಿ, ಕೈಮಗ್ಗ ನೇಕಾರರ ಸಂಘದ ಚುನಾವಣೆ ಮೇ.4ಕ್ಕೆ

Published on

ಬಳ್ಳಾರಿ : ಇಲ್ಲಿನ ಲಿಮ್ರಾ ರೇಷ್ಮೆ, ಹತ್ತಿ, ಕೈಮಗ್ಗ ನೇಕಾರರ ಉತ್ಪಾದನಾ ಮತ್ತು ಮಾರಾಟ ಸಹಕಾರ ಸಂಘದ ಆಡಳಿತ ಮಂಡಳಿ, ನಿರ್ದೇಶಕ ಸ್ಥಾನಕ್ಕೆ ಮೇ.04 ರಂದು ಚುನಾವಣೆ ನಡೆಯಲಿದೆ.

ನಾಮಪತ್ರ ಸಲ್ಲಿಕೆ ಕಾರ್ಯ ಆರಂಭವಾಗಿದ್ದು, ಏ.26ರ ಮದ್ಯಾಹ್ನ 3 ಗಂಟೆವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ಇರಲಿದೆ. ಏ.27 ರಂದು ಬೆಳಗ್ಗೆ 11ಕ್ಕೆ ನಾಮಪತ್ರ ಪರಿಶೀಲನೆ ನಡೆಯಲಿದ್ದು, ಏ.28ರ ಮಧ್ಯಾಹ್ನ 3 ಗಂಟೆ ಒಳಗಾಗಿ ನಾಮಪತ್ರ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ಮೇ.4 ರಂದು ಸಂಘದ ಕಚೇರಿಯಲ್ಲಿ ಚುನಾವಣೆ ನಡೆಯಲಿದ್ದು ಅದೇ ದಿನ ಫಲಿತಾಂಶ ಪ್ರಕಟವಾಗಲಿದೆ ಎಂದು ಸಹಕಾರ ಸಂಘಗಳ ಹಿರಿಯ ನಿರೀಕ್ಷಕ ದುರಗಪ್ಪ ತಿಪ್ಪನಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

===

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net