

ಬಳ್ಳಾರಿ: ಜಿಲ್ಲೆಯ 18 ಕೇಂದ್ರಗಳಲ್ಲಿ ಗುರುವಾರ ಸಿಇಟಿ ಪರೀಕ್ಷೆ ನಡೆಯಿತು. ಆರು ಜನ ಕರೊನಾ ಸೋಂಕಿತ ವಿದ್ಯಾರ್ಥಿಗಳು ಪಿಪಿಇ ಕಿಟ್ ಧರಿಸಿ ಪ್ರತ್ಯೇಕ ಕೇಂದ್ರದಲ್ಲಿ ಪರೀಕ್ಷೆ ಬರೆದರು. ನಗರದ ವಿಮ್ಸ್ ದಂತ ವೈದ್ಯಕೀಯ ಕಾಲೇಜಿನಲ್ಲಿ ಸೋಂಕಿತರಿಗಾಗಿ ಪ್ರತ್ಯೇಕ ಕೇಂದ್ರದ ವ್ಯವಸ್ಥೆ ಮಾಡಲಾಗಿತ್ತು. ಬಳ್ಳಾರಿ, ಸಿರಗುಪ್ಪ ಹಾಗೂ ಹೂವಿನ ಹಡಗಲಿ ತಾಲೂಕಿನ ತಲಾ ಇಬ್ಬರು ಸೋಂಕಿತರು ಪರೀಕ್ಷೆ ಎದುರಿಸಿದರು. ವಿದ್ಯಾರ್ಥಿಗಳನ್ನು ಆಂಬುಲೆನ್ಸ್‌ನಲ್ಲಿ ಪರೀಕ್ಷಾ ಕೇಂದ್ರಕ್ಕೆ ಕರೆದುಕೊಂಡು ಬರಲಾಗಿತ್ತು.