ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಗುರು ಎಲಿಜಬೆತ್ ಏಳು ವರ್ಷ ಹಾಗೂ ಸಹ ಶಿಕ್ಷಕ ಪ್ರದೀಪ್ ಅವರು 18 ವರ್ಷ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ. ಇಬ್ಬರು ಶಿಕ್ಷಕರನ್ನು ಅಲಂಕರಿತ ವಾಹನದಲ್ಲಿ ಕೂರಿಸಿ, ಮಂಗಳವಾದ್ಯಗಳೊಂದಿಗೆ ಅದ್ಧೂರಿಯಾಗಿ ಮೆರವಣಿಗೆ ಮಾಡಲಾಯಿತು. ಮೆರವಣಿಗೆ ಸಾಗುವ ದಾರಿಯುದ್ದಕ್ಕೂ ಗ್ರಾಮಸ್ಥರು ಹೂವಿನ ಮಳೆ ಸುರಿಸಿ, ಅಕ್ಷತೆ ಕಾಳುಗಳನ್ನು ಹಾಕಿ ಗುರುಗಳಿಗೆ ಭಕ್ತಿಪೂರ್ವಕವಾಗಿ ಶುಭ ಹಾರೈಸಿದರು. ಶಿಕ್ಷಕರ ಬೀಳ್ಕೊಡುಗೆ ಸಮಾರಂಭವು ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಕೇವಲ ಶಾಲೆಗಷ್ಟೇ ಸೀಮಿತವಾಗದೆ, ಇಡೀ ಗ್ರಾಮವೇ ಒಂದಾಗಿ ಈ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಎಸ್‌ಡಿಎಂಸಿ ಸದಸ್ಯರು, ಹಳೆಯ ವಿದ್ಯಾರ್ಥಿಗಳು ಹಾಗೂ ಗ್ರಾಮದವರು ಸೇರಿ ಶಾಲೆಯಲ್ಲೇ ಊಟದ ವ್ಯವಸ್ಥೆ ಮಾಡಿದ್ದರು.