ಕನ್ನಡ ಭಾಷೆಗೆ ಶಕ್ತಿ ತುಂಬಿದ ಮಹನೀಯ

ಕುರುಗೋಡು ತಾಲೂಕು ಆಡಳಿತ ಕಚೇರಿಯಲ್ಲಿ ಕುವೆಂಪು ಜನ್ಮದಿನ ಆಚರಿಸಲಾಯಿತು.
ಕುರುಗೋಡು ತಾಲೂಕು ಆಡಳಿತ ಕಚೇರಿಯಲ್ಲಿ ಕುವೆಂಪು ಜನ್ಮದಿನ ಆಚರಿಸಲಾಯಿತು.
Published on
ಕುರುಗೋಡು: ಕುವೆಂಪು ಅವರು ಸಮಾಜಕ್ಕೆ ಉತ್ತಮ ಸಂದೇಶ ನೀಡುವುದರೊಂದಿಗೆ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದು, ಅವರ ಸ್ಮರಣೆ ಅಗತ್ಯ ಎಂದು ತಹಸೀಲ್ದಾರ್ ನರಸಪ್ಪ ಹೇಳಿದರು.
ಪಟ್ಟಣದ ತಾಲೂಕು ಆಡಳಿತ ಕಚೇರಿಯಲ್ಲಿ ಕುವೆಂಪು ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಸೋಮವಾರ ಮಾತನಾಡಿದರು. ಕುವೆಂಪು ಅವರು ಎಲ್ಲ ಪ್ರಕಾರದ ಸಾಹಿತ್ಯದಲ್ಲಿ ತೊಡಗಿಸಿಕೊಂಡು ಸಾಹಿತ್ಯ ಕೃಷಿ ಮಾಡಿದ್ದಾರೆ. ಮನುಜಮತ ವಿಶ್ವಪಥ ಎಂದು ಸಮಾಜಕ್ಕೆ ಅನೇಕ ಸಂದೇಶ ನೀಡಿದ್ದಾರೆ. ಹಾಗಾಗಿ ಕುವೆಂಪು ಅವರನ್ನು ವಿಶ್ವಮಾನವ ಎಂದು ಹೇಳಲಾಗುತ್ತದೆ ಎಂದರು.
ಮನುಷ್ಯ ಹಾಗೂ ಭಗವಂತನ ಸಂಬಂಧ ನಿಗೂಢವಾಗಿದ್ದು, ಅಧ್ಯಾತ್ಮ ಸಾಧನೆ ನಮ್ಮ ಗುರಿಯಾಗಬೇಕು ಎಂಬುದು ಕುವೆಂಪು ಸಾಹಿತ್ಯದಲ್ಲಿ ಕಾಣಬಹುದು. ಕುವೆಂಪು ಅಧ್ಯಾಪಕರಾಗಿ, ಪ್ರಾಚಾರ್ಯ, ಶಿಕ್ಷಣ ತಜ್ಞರಾಗಿ ಶ್ರೇಷ್ಠ ಕೆಲಸ ಮಾಡಿ ಕನ್ನಡ ಭಾಷೆಗೆ ಶಕ್ತಿ ನೀಡಿದ್ದಾರೆ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net