ವ್ಯಕ್ತಿಗೆ ವಾಟ್ಸ್‌ಆ್ಯಪ್‌ಗೆ ಕಳೆದ ತಿಂಗಳು ಅಪರಿಚಿತ ಸಂಖ್ಯೆಯಿಂದ ಷೇರು ಮಾರುಕಟ್ಟೆಗೆ ಸಂಬಂಧಿಸಿದ ಜಾಹಿರಾತು ಬಂದಿತ್ತು. ಆದನ್ನು ಕ್ಲಿಕ್ ಮಾಡಿದ ವ್ಯಕ್ತಿ ಗ್ರೂಪ್‌ವೊಂದಕ್ಕೆ ಸೇರಿದ್ದರು. ಅಲ್ಲಿ ಷೇರು ಮಾರುಕಟ್ಟೆ ಕುರಿತು ಮಾಹಿತಿ ನೀಡಲಾಗಿತ್ತು ಎನ್ನಲಾಗಿದೆ. ಬಳಿಕ ಶೇ. 15ರ ಹಣ ನೀಡುವ ಆಮಿಷವೊಡ್ಡಿ ಹಂತ ಹಂತವಾಗಿ 16,82,047 ರೂ. ಹಣವನ್ನು ವಂಚಕರ ಖಾತೆಗೆ ಜಮೆ ಮಾಡಿದ್ದಾರೆ. ಈ ಕುರಿತು ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.