ಇಂದಿನ ಯುವ ಪೀಳಿಗೆಗೆ ಮಾದರಿ

ಬಳ್ಳಾರಿಯ ಡಾ.ರಾಜ್‌ಕುಮಾರ್ ಉದ್ಯಾನವನದಲ್ಲಿ  ಡಾ.ರಾಜ್‌ಕುಮಾರ ಜಯಂತಿ ಅಂಗವಾಗಿ ಪುತ್ಥಳಿಗೆ  ಮಾಲಾರ್ಪಣೆ ಮಾಡಲಾಯಿತು. ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ, ಎಸಿ ಎಚ್.ಡಿ.ರಾಜೇಶ್, ಎಡಿಸಿ ಮಹಮ್ಮದ್ ಎನ್.ಜುಬೇರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾ ಸಹಾಯಕ ವಿ.ಸಿ ಗುರುರಾಜ್ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಪೀಳಿಗೆ
ಬಳ್ಳಾರಿ : ಡಾ.ರಾಜ್‌ಕುಮಾರ್ ಅವರ ಆದರ್ಶಗಳು ಇಂದಿನ ಯುವ ಪೀಳಿಗೆಗೆ ದಾರಿದೀಪವಾಗಲಿ ಎಂದು ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ ಹೇಳಿದರು.
ನಗರದ ಡಾ.ರಾಜ್‌ಕುಮಾರ್ ಉದ್ಯಾನವನದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದೊಂದಿಗೆ ಡಾ.ರಾಜ್‌ಕುಮಾರ ಜಯಂತಿ ಅಂಗವಾಗಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿದರು. ನಟ ದಿ. ಡಾ. ರಾಜ್‌ಕುಮಾರ್ ಅವರು ಅಪ್ಪಟ ಕನ್ನಡಪ್ರೇಮಿಯಾಗಿದ್ದರು. ಅವರ ಸಾಧನೆ ಹಾಗೂ ಕನ್ನಡ ನಾಡು-ನುಡಿಗೆ ಅವರು ನೀಡಿದ ಕೊಡುಗೆ ಅಪಾರವಾಗಿದೆ. ಕರ್ನಾಟಕ ಏಕೀಕರಣ ಮತ್ತು ಕನ್ನಡ ಭಾಷೆಯ ಉಳಿವಿಗಾಗಿ ನಡೆದ ಗೋಕಾಕ್ ಚಳುವಳಿಯಲ್ಲಿ ಡಾ. ರಾಜ್ ಅವರ ಪಾತ್ರ ಅವಿಸ್ಮರಣೀಯ. ಅವರ ನಾಯಕತ್ವದಲ್ಲಿ ನಡೆದ ಈ ಹೋರಾಟ ಕನ್ನಡ ಭಾಷೆಯ ಇತಿಹಾಸದಲ್ಲಿ ಮೈಲಿಗಲ್ಲಾಗಿದೆ ಎಂದು ಹೇಳಿದರು.
ಎಡಿಸಿ ಮಹಮ್ಮದ್ ಎನ್. ಜುಬೇರ್ ಮಾತನಾಡಿ, ಡಾ.ರಾಜ್ ಕುಮಾರ್ ಅವರು ಕೇವಲ ನಟರಲ್ಲ, ಅವರು ಕನ್ನಡ ಸಂಸ್ಕೃತಿಯ ರಾಯಭಾರಿ. ಅವರ ಬಂಗಾರದ ಮನುಷ್ಯ, ಗುರಿ ಅಂತಹ ಚಿತ್ರಗಳು ಇಂದಿಗೂ ಸಮಾಜಕ್ಕೆ ಮಾದರಿಯಾಗಿವೆ. ಡಾ. ರಾಜ್ ಹಾಡುಗಳ ಸಾಹಿತ್ಯದಲ್ಲಿರುವ ಜೀವನ ಮೌಲ್ಯಗಳು ಆಳವಾಗಿ ಬೇರೂರಿವೆ ಎಂದರು.
====
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net