ಬಳ್ಳಾರಿ : ಸಂಡೂರು ತಾಲೂಕಿನ ಕುಡುತಿನಿ ನಿವಾಸಿ ಪರಶುರಾಮ (45) ಮೃತ. ಇಲ್ಲಿನ ರಾಘವೇಂದ್ರ ಸಿನಿಮಾ ಮಂದಿರದ ಬಳಿ ಚಲಿಸುತ್ತಿದ್ದ ಲಾರಿಯ ಹಿಂಬದಿ ಚಕ್ರಕ್ಕೆ ಪರಶುರಾಮ ಹಾರಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಪರಶುರಾಮ ಅವರು ನಾಯಿ ಕಡಿತಕ್ಕೊಳಗಾಗಿ ಚಿಕಿತ್ಸೆ ಪಡೆಯಲು ನಗರಕ್ಕೆ ಬಂದಿದ್ದರು. ಆದರೆ, ಚಿಕಿತ್ಸೆಯಲ್ಲಿ ವಿಳಂಬವಾಗುತ್ತಿರುವುದಕ್ಕೆ ಬೇಸತ್ತು ಮದ್ಯ ಸೇವಿಸಿದ್ದರು ಎನ್ನಲಾಗಿದೆ. ಮಾನಸಿಕ ಆಸ್ವಸ್ಥ ಕೂಡ ಆಗಿದ್ದರು ಎಂದು ಪೊಲೀಸರು ತಿಳಿಸದರು.