ವಜಾಗೊಳಿಸುವ ನಿರ್ಧಾರ ಕೈಬಿಡಿ

ಬಳ್ಳಾರಿಯ ಡಿಸಿ ಕಚೇರಿ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಅನಿರ್ಧಿಷ್ಟ ಪ್ರತಿಭಟನಾ ಧರಣಿ ನಡೆಯಿತು. ಸಂಘದ ಗೌರವಾಧ್ಯಕ್ಷೆ ಶಾಂತಾ ಎ., ಜಿಲ್ಲಾಧ್ಯಕ್ಷೆ ಎಂ.ಗೀತಾ, ಪದಾಧಿದಕಾರಿಗಳಾದ ಮಾಣಿಕ್ಯಮ್ಮ, ದೇವದಾಸ್, ಪ್ರಮೋದ್, ನೇತ್ರಾವತಿ, ಈರಮ್ಮ ಇತರರಿದ್ದರು. ====
ಬಳ್ಳಾರಿಯ ಡಿಸಿ ಕಚೇರಿ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಅನಿರ್ಧಿಷ್ಟ ಪ್ರತಿಭಟನಾ ಧರಣಿ ನಡೆಯಿತು. ಸಂಘದ ಗೌರವಾಧ್ಯಕ್ಷೆ ಶಾಂತಾ ಎ., ಜಿಲ್ಲಾಧ್ಯಕ್ಷೆ ಎಂ.ಗೀತಾ, ಪದಾಧಿದಕಾರಿಗಳಾದ ಮಾಣಿಕ್ಯಮ್ಮ, ದೇವದಾಸ್, ಪ್ರಮೋದ್, ನೇತ್ರಾವತಿ, ಈರಮ್ಮ ಇತರರಿದ್ದರು. ====
Published on

ಪ್ರಮುಖ ಮುಖ್ಯಾಂಶಗಳು

  • ಕಾರ್ಯಕರ್ತೆ
ಬಳ್ಳಾರಿ : ತರ್ಕ ಬದ್ಧಗೊಳಿಸುವ ಹೆಸರಲ್ಲಿ ಆಶಾಗಳನ್ನು ಕೈಬಿಡುವ ನಿರ್ಧಾರ ಹಿಂಪಡೆಯುವಂತೆ ಆಗ್ರಹಿಸಿ, ಇಲ್ಲಿನ ಡಿಸಿ ಕಚೇರಿ ಆವರಣದ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಅನಿರ್ಧಿಷ್ಟ ಪ್ರತಿಭಟನಾ ಧರಣಿ ನಡೆಯಿತು.
ಸಂಘದ ಜಿಲ್ಲಾಧ್ಯಕ್ಷೆ ಎಂ.ಗೀತಾ ಮಾತನಾಡಿ, ಆಶಾಗಳಿಗೆ ಜನಸಂಖ್ಯೆಯನ್ನು ತರ್ಕಬದ್ಧಗೊಳಿಸುವ ಹೆಸರಲ್ಲಿ ಸಾವಿರಾರು ಆಶಾಗಳನ್ನು ವಜಾಗೊಳಿಸುವ ಆರೋಗ್ಯ ಇಲಾಖೆ ಹಾಗೂ ರಾಜ್ಯ ಸರ್ಕಾರದ ನಿರ್ಧಾರವು ಆಶಾಗಳಿಗೆ ಘೋರ ಅಘಾತ ತಂದಿದೆ. ಇದೇ ವೃತ್ತಿಯನ್ನು ನಂಬಿರುವ ಆಶಾ ಮತ್ತವರ ಕುಟುಂಬಗಳು ಬೀದಿಗೆ ಬರುವ ಅತಂಕ ಎದುರಾಗಿದೆ. ಜಿಲ್ಲೆಯೊಂದರಲ್ಲೇ ಸುಮಾರು 200ಕ್ಕೂ ಹೆಚ್ಚು ಕಾರ್ಯಕರ್ತೆಯರು ಇದರಿಂದ ಬೀದಿಗೆ ಬರಲಿದ್ದಾರೆ. ಇದು ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ನೇರ ಉಲ್ಲಂಘನೆಯಾಗಿದೆ. ಯಾವುದೇ ರಾಜ್ಯದಲ್ಲಿ ಇಲ್ಲದ ಇಂತಹ ನಿಯಮವನ್ನು ಕರ್ನಾಟಕದಲ್ಲಿ ಮಾತ್ರ ಜಾರಿಗೆ ತರಲು ಹೊರಟಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾರ್ಯಕರ್ತೆಯರು ದಿನವಿಡೀ ದುಡಿದರೂ ಅವರಿಗೆ ಸಿಗುತ್ತಿರುವ ಗೌರವನ ಅತ್ಯಲ್ಪ. ಇದರ ನಡುವೆ ಆರ್‌ಸಿಎಚ್ ಪೋರ್ಟಲ್‌ನಲ್ಲಿನ ತಾಂತ್ರಿಕ ದೋಷಗಳಿಂದಾಗಿ ದುಡಿದ ಹಣ ಸರಿಯಾಗಿ ಸಿಗುತ್ತಿಲ್ಲ. ಇತ್ತೀಚೆಗೆ ಜಾರಿಗೆ ತಂದಿರುವ ಸ್ಪರ್ಶ ಆ್ಯಪ್‌ನಿಂದಾಗಿ ಇನ್ಸೆಂಟಿವ್ ಹಣ ಮೂರು ತಿಂಗಳಿಗೊಮ್ಮೆ ಬರುವಂತಾಗಿದ್ದು, ಬಡ ಕುಟುಂಬಗಳ ಜೀವನ ನಿರ್ವಹಣೆ ಕಷ್ಟವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ತರ್ಕಬದ್ಧಗೊಳಿಸುವಿಕೆ ಹೆಸರಿನಲ್ಲಿ ಆಶಾಗಳನ್ನು ಕೆಲಸದಿಂದ ತೆಗೆಯುವ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕು. ಪ್ರತಿ ತಿಂಗಳು 5ನೇ ತಾರೀಖಿನ ಒಳಗೆ ಗೌರವನ ಮತ್ತು ಪ್ರೋತ್ಸಾಹನ ವಿಳಂಬವಿಲ್ಲದೆ ಪಾವತಿಯಾಗಬೇಕು. 2025ರ ಜನವರಿಯಲ್ಲಿ ಸಿಎಂ ನೀಡಿದ ಭರವಸೆಯಂತೆ ಪ್ರತಿ ಆಶಾ ಕಾರ್ಯಕರ್ತೆಗೆ ಮಾಸಿಕ 10,000 ರೂ. ನಿಶ್ಚಿತ ಗೌರವನ ನೀಡಬೇಕು ಎಂದು ಒತ್ತಾಯಿಸಿದರು. ಸಮಸ್ಯೆಗಳು ಇತ್ಯರ್ಥವಾಗುವವರೆಗೂ ಅನಿರ್ದಿಷ್ಟಾವಧಿ ಧರಣಿ ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದರು.
====
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net