ಹಗರಿಬೊಮ್ಮನಹಳ್ಳಿ ಸಿಪಿಐ(ಎಂ) ತಾಲೂಕು ಪದಾಧಿಕಾರಿಗಳು ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ತಾಲೂಕು ಕಾರ್ಯದರ್ಶಿ ಬಿ.ಮಾಳಮ್ಮ, ಪ್ರಮುಖರಾದ ಎಸ್.ಜಗನ್ನಾಥ್, ರಂಗಪ್ಪ ದಾಸರ, ಕೊಟಗಿ ಮಲ್ಲಿಕಾರ್ಜುನ ಮತ್ತಿತರರು ಇದ್ದರು.
ಹಗರಿಬೊಮ್ಮನಹಳ್ಳಿ: ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ದಾಳಿಯನ್ನು ಖಂಡಿಸಿ, ಸಿಪಿಐ(ಎಂ) ತಾಲೂಕು ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಶನಿವಾರ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಪಕ್ಷದ ಕಚೇರಿಯಿಂದ ಪ್ರತಿಭಟನಾ ರ‌್ಯಾಲಿಯ ಮೂಲಕ ಆಗಮಿಸಿ ವಿವಿಧ ಘೋಷಣೆಗಳನ್ನು ಕೂಗಿದರು.
ತಾಲೂಕು ಕಾರ್ಯದರ್ಶಿ ಬಿ.ಮಾಳಮ್ಮ ಮಾತನಾಡಿ, ರಾಜಕೀಯ ದ್ವೇಷ ಸಾಧನೆಗೆ ಸಾಂವಿಧಾನಿಕ ಸಂಸ್ಥೆಗಳನ್ನು ನರೇಂದ್ರ ಮೋದಿ ಸರ್ಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ. ಇದನ್ನು ನಾವು ಖಂಡಿಸುತ್ತೇವೆ.
ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಿಕೊಂಡು ನಡೆಸುತ್ತಿರುವ ದಾಳಿಗಳ ಹಿಂದೆ ದೇಶದಾದ್ಯಂತ ಅರಾಜಕತೆ ಸೃಷ್ಟಿಸುವ ಹುನ್ನಾರವಿದೆ ಎಂದು ವಾಗ್ದಾಳಿ ನಡೆಸಿದರು.