

ಪ್ರಮುಖ ಮುಖ್ಯಾಂಶಗಳು
ಹರಪನಹಳ್ಳಿ: ನಿರ್ಗತಿಕ ಕುಟುಂಬಗಳಿಗೆ ವಸತಿ ಸೌಲಭ್ಯ ಕಲ್ಪಿಸಿಕೊಡುವಂತೆ ಒತ್ತಾಯಿಸಿ ನಗರದ ಹಿರೇಕೆರೆ ನಿವಾಸಿಗಳು ಸೋಮವಾರ ತಹಸೀಲ್ದಾರ್ ಬಿ.ವಿ. ಗಿರೀಶ್ ಬಾಬುಗೆ ಮನವಿ ಸಲ್ಲಿಸಿದರು.
ಈಗಿರುವ ಮನೆಗಳನ್ನು ಸರ್ಕಾರ ತೆರವುಗೊಳಿಸಿ ಆ ಸ್ಥಳದಲ್ಲಿ ವಾಣಿಜ್ಯ ಮಳಿಗೆಗಳನ್ನು ಮಾಡಲು ಸಿದ್ಧತೆ ನಡೆಸಿದ್ದು, ಕಳೆದ 50 ವರ್ಷಗಳಿಂದ ವಾಸವಾಗಿದ್ದ ಕುಟುಂಬಗಳು ಇದರಿಂದ ಬೀದಿಗೆ ಬೀಳುವ ಆತಂಕವಿದೆ. ಜನಪ್ರತಿನಿಧಿಗಳಿಗೆ ಶಾಶ್ವತವಾಗಿ ಸೂರು ಕಲ್ಪಿಸಿಕೊಡಲು ಹತ್ತಾರು ವರ್ಷಗಳಿಂದ ಒತ್ತಾಯಿಸುತ್ತಾ ಬರುತ್ತಿದ್ದರೂ ಪ್ರಯೋಜನವಾಗಿಲ್ಲ.
ಮೊದಲು ಎಲ್ಲ ಕುಟುಂಬಗಳಿಗೆ ನಿವೇಶನ ಒದಗಿಸಿ ನಂತರ ಮನೆಗಳ ತೆರವಿಗೆ ಮುಂದಾಗಬೇಕು. ಇಲ್ಲವಾದಲ್ಲಿ ಹೋರಾಟದ ಸ್ವರೂಪ ಬದಲಿಸ ಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.