ಪ್ರತಿಯೊಬ್ಬರಿಗೂ ಪ್ರೇರಣೆಯಾಗಿದೆ ಸಾಧನೆ

ಕುರುಗೋಡು ತಾಲೂಕು ಆಡಳಿತ ಕಚೇರಿಯಲ್ಲಿ ಡಾ.ಬಾಬು ಜಗಜೀವನರಾಮ್ ಜಯಂತಿ ಆಚರಿಸಲಾಯಿತು.
ಕುರುಗೋಡು ತಾಲೂಕು ಆಡಳಿತ ಕಚೇರಿಯಲ್ಲಿ ಡಾ.ಬಾಬು ಜಗಜೀವನರಾಮ್ ಜಯಂತಿ ಆಚರಿಸಲಾಯಿತು.
Published on
ಕುರುಗೋಡು: ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್ ದೇಶ ಕಂಡ ಅಪ್ರತಿಮ ನಾಯಕರಾಗಿದ್ದು, ಅವರ ಸಾಧನೆ ಪ್ರತಿಯೊಬ್ಬರಿಗೂ ಪ್ರೇರಣೆಯಾಗಿದೆ ಎಂದು ತಹಸೀಲ್ದಾರ್ ನರಸಪ್ಪ ಹೇಳಿದರು.
ಪಟ್ಟಣದ ತಾಲೂಕು ಆಡಳಿತ ಕಚೇರಿಯಲ್ಲಿ ಆಯೋಜಿಸಿದ್ದ ಡಾ.ಬಾಬು ಜಗಜೀವನರಾಮ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಧಿಕಾರ ಮತ್ತು ಐಶ್ವರ್ಯದಿಂದ ಗಳಿಸಲಾಗದ ಕೀರ್ತಿಯನ್ನು ಸೇವೆ, ತ್ಯಾಗದಿಂದ ಸಂಪಾದಿಸಬಹುದು ಎನ್ನುವ ಸಂದೇಶ ಸಾರಿದ ಹೆಗ್ಗಳಿಕೆ ಬಾಬು ಜಗಜೀವನರಾಮ್ ಅವರಿಗೆ ಸಲ್ಲುತ್ತದೆ ಎಂದರು.
ಸಮಾಜ ಸುಧಾರಣೆ ಹಾಗೂ ಎಲ್ಲರೂ ಸಮಾನವಾಗಿ ಜೀವನ ನಡೆಸಬೇಕು ಎನ್ನುವ ಮಹತ್ವಾಕಾಂಕ್ಷೆಯನ್ನು ಬಾಬೂಜಿ ಹೊಂದಿದ್ದರು. ಕಾರ್ಮಿಕರ ಏಳಿಗೆಯನ್ನು ಸದಾ ಬಯಸುತ್ತಿದ್ದರು. ದೇಶದ ಜನರು ಅಹಾರ ಕೊರತೆ ಅನುಭವಿಸುತ್ತಿರುವುದನ್ನು ಕಂಡು ಹಸಿರು ಕ್ರಾಂತಿ ಮೂಲಕ ನೆರವಾದರು ಎಂದು ತಿಳಿಸಿದರು.
ಭಾಷಣ ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ಮಕ್ಕಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಅಧಿಕಾರಿಗಳಾದ ಸುರೇಶ್, ಭದ್ರಿ ರಾಜೇಂದ್ರ ಪ್ರಸಾದ್, ಅಲ್ಲಭಕ್ಷಿ, ಸಿದ್ದಲಿಂಗಯ್ಯಮೂರ್ತಿ, ಕಿರಣ್, ಪ್ರಮುಖ ಸಿದ್ದಪ್ಪ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net