ಎಸ್‌ಐಆರ್ ಪ್ರಕ್ರಿಯೆಯನ್ನು ಅತ್ಯಂತ ವ್ಯವಸ್ಥಿತ ಹಾಗೂ ಪಾರದರ್ಶಕವಾಗಿ ನಡೆಸಲು ಚುನಾವಣಾ ಆಯೋಗವು ವಿಧಿ-ವಿಧಾನಗಳನ್ನು ರೂಪಿಸಿದೆ. ಮನೆ-ಮನೆ ಸಮೀಕ್ಷೆ ಮತ್ತು ಗಣತಿ ಪ್ರಕ್ರಿಯೆಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಮತ್ತು ವಿವಿಧ ರಾಜಕೀಯ ಪಕ್ಷಗಳು ನೇಮಿಸಿರುವ ಬೂತ್ ಮಟ್ಟದ ಏಜೆಂಟರು ಮನೆ-ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಾರೆ. ಮತದಾರರಿಗೆ ಗಣತಿ ನಮೂನೆಯನ್ನು ನೀಡಲಾಗುತ್ತದೆ. ಇದರಲ್ಲಿ ಎರಡು ಪ್ರತಿಗಳಿರುತ್ತವೆ ಒಂದನ್ನು ಮತದಾರರು ತಮ್ಮ ಬಳಿ ಇಟ್ಟುಕೊಳ್ಳಬೇಕು, ಮತ್ತೊಂದನ್ನು ಅಧಿಕಾರಿಗಳಿಗೆ ನೀಡಬೇಕು ಎಂದರು.