ಶಿಷ್ಟಾಚಾರದಂತೆ ಕಾರ್ಯ ನಿರ್ವಹಿಸಿ

ಬಳ್ಳಾರಿಯ ಡಿಸಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಎಡಿ ರಾಜೇಶ್ ಎಚ್.ಡಿ. ಮಾತನಾಡಿದರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಇದ್ದರು.
ಬಳ್ಳಾರಿಯ ಡಿಸಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಎಡಿ ರಾಜೇಶ್ ಎಚ್.ಡಿ. ಮಾತನಾಡಿದರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾಡಳಿತ
ಬಳ್ಳಾರಿ : ಜಿಲ್ಲಾಡಳಿತದಿಂದ ನಡೆಯುವ ವಿವಿಧ ಮಹನೀಯರ ಜಯಂತಿ ಕಾರ್ಯಕ್ರಮಗಳು ಶಿಷ್ಟಾಚಾರದನ್ವಯ ಅಧಿಕಾರಿಗಳು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಎಸಿ ರಾಜೇಶ್ ಎಚ್.ಡಿ.ಹೇಳಿದರು.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ವಿವಿಧ ಮಹನೀಯರ ಜಯಂತಿ ಅಂಗವಾಗಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ನಗರದಲ್ಲಿ ಫೆ.15ರಂದು ಸಂತ ಸೇವಾಲಾಲ್, ಫೆ.19ರಂದು ಛತ್ರಪತಿ ಶಿವಾಜಿ ಮತ್ತು ಫೆ.20 ರಂದು ಸಂತ ಕವಿ ಸರ್ವಜ್ಞ ಜಯಂತಿ ನಡೆಯಲಿವೆ. ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ. ಬ್ಯಾನರ್ ಅಳವಡಿಕೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಸೂಚನೆಗಳಿದ್ದು, ಮಹಾನಗರ ಪಾಲಿಕೆಯಿಂದ ಅನುಮತಿ ಪಡೆಯಲೇ ಬೇಕು. ಡಿಜೆ ಧ್ವನಿವರ್ಧಕ ಬಳಕೆ, ಬೈಕ್ ರ‌್ಯಾಲಿಗೆ ಅವಕಾಶವಿಲ್ಲ. ಶಾಂತಿ-ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಭಕ್ತಿ-ಭಾವದಿಂದ ಮಹನೀಯರ ಜಯಂತಿ ಆಚರಿಸೋಣ. ಇದಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದರು.
ಜಯಂತಿ ಕಾರ್ಯಕ್ರಮದ ಅಂಗವಾಗಿ ಮೆರವಣಿಗೆ ನಡೆಯಲಿದ್ದು, ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಮೆರವಣಿಗೆಯಲ್ಲಿ ವಿವಿಧ ಸಾಂಸ್ಕೃತಿಕ ಕಲಾತಂಡಗಳನ್ನು ನಿಯೋಜಿಸಲಾಗುವುದು. ಕುಡಿವ ನೀರಿನ ವ್ಯವಸ್ಥೆ, ಸ್ವಚ್ಛತೆ ಕಾರ್ಯವನ್ನು ನಿರ್ವಹಿಸಬೇಕು. ಜಯಂತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net